ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಹುಳುಪಿನಕಟ್ಟೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಡಿ.07 ಮತ್ತು 08 ರಂದು ನಗರದ ಮಾಕನೂರ ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾನಿಲಯದಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಡಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಎರಡು ದಿನಗಳ ಪ್ರಾಯೋಗಿಕ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಉಪ ನಿದೇಶಕರು ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.