ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಡಿಸೆಂಬರ್ 10 ರಂದು ಬೆಳಿಗ್ಗೆ 10.30ಕ್ಕೆ ಬಿ.ಐ.ಇ.ಟಿ ಕಾಲೇಜ್ ಮುಂಭಾಗದಲ್ಲಿರುವ ಯುರೋ ಶಾಲೆಯಲ್ಲಿ ಸಾಂಸ್ಕøತಿಕ ಮತ್ತು ಶೈಕ್ಷಣಿಕ ವಿಕಸನದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2022-23 ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ.
ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು.
ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಎಂ ಸಿದ್ದೇಶ್ವರ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಮಾಡಾಳ್ ಕೆ ವಿರುಪಾಕ್ಷಪ್ಪ, ಹೊನ್ನಾಳಿ ವಿಧಾನಸಭಾ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ,ಜಗಳೂರು ವಿಧಾನಸಭಾಕ್ಷೇತ್ರದ ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟಪಂಗಡದ ಅಧ್ಯಕ್ಷರಾದ ಎಸ್.ವಿ ರಾಮಚಂದ್ರ, ಸರ್ಕಾರಿ ಮುಖ್ಯ ಸಚೇತಕರಾದ ವೇ.ಎ ನಾರಾಯಣಸ್ವಾಮಿ, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಮಾಯಕೊಂಡ ಕ್ಷೇತ್ರದ ಶಾಸಕರಾದ ಪ್ರೊ.ಎನ್.ಲಿಂಗಣ್ಣ ಗೌರವಾನ್ವಿತ ಉಪಸ್ಥಿತಿತರಿವರು
ಮುಖ್ಯಅತಿಥಿಗಳಾಗಿ ವಿಧಾನಸಭಾ ಕ್ಷೇತ್ರದ ಡಾ.ಶಾಮನೂರು ಶಿವಶಂಕರಪ್ಪ, ವಿಧಾನಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಎಸ್.ರಾಮಪ್ಪ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ಡಾ.ತೇಜಸ್ವಿನಿಗೌಡ, ಆಯನೂರ ಮಂಜುನಾಥ, ಎಸ್.ಎನ್ ಬೋಜೆಗೌಡ, ಆರ್.ಶಂಕರ್, ಚಿದಾನಂದ ಎಂ ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬರ್, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಬಸವರಾಜ ನಾಯಕ, ಮಹಾನಗರಪಾಲಿಕೆಯ ಮಹಾಪೌರರು, ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು, ಪಾಲಿಕೆಯ ಸದಸ್ಯರಾದ ರೇಖಾ ಸುರೇಶ್ ಗಂಡ್ಗಾಳೆ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಅಪರ ಜಿಲ್ಲಾಧಿಕಾರಿ, ಮಹಾನಗರಪಾಲಿಕೆಯ ಆಯುಕ್ತರು, ಯುರೋ ಕಿಡ್ಸ್ ಮತ್ತು ಯುರೋಶಾಲೆಯ ಕಾರ್ಯದರ್ಶಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.