ಹೊನ್ನಾಳಿ:
ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಕಾರ್ತಿಕೋತ್ಸವ, ರಥೋತ್ಸವ, ಸಾಮೂಹಿಕ ವಿವಾಹ ಮತ್ತು ಹೂವಿನ ಅಡ್ಡಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ಡಿ.8 ಮತ್ತು 9ರಂದು ನಡೆಯಲಿವೆ.
8ರ ಗುರುವಾರ ಬೆಳಿಗ್ಗೆ 6ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಉರುಳು ಸೇವೆ, ಜವುಳ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8ಕ್ಕೆ ಕಾರ್ತಿಕೋತ್ಸವ, ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿಯ ದೇವಸ್ಥಾನದಿಂದ ದೀಪ ರಥೋತ್ಸವ ಕಾರ್ಯಕ್ರಮ ಇದೆ. ಶ್ರೀ ಗುರು ಗದ್ದಿಗೇಶ್ವರ ಸ್ವಾಮಿಯನ್ನು ಕೈಲಾಸ ಸಭಾ ಮಂಟಪಕ್ಕೆ ತಂದು ಪೀಠಾರೋಹಣ ಮಾಡಲಾಗುವುದು. ರಾತ್ರಿ 10ರಿಂದ ಅನ್ನಸಂತರ್ಪಣೆ ನಡೆಸಲಾಗುವುದು. ಕೂಲಂಬಿ ಗ್ರಾಮದ ಶ್ರೀ ಗದ್ದಿಗೇಶ್ವರ ಭಜನಾ ಮಂಡಳಿ ವತಿಯಿಂದ ದೀಪೋತ್ಸವ ಹಾಗೂ ಗ್ರಾಮಾಂತರ ಭಜನಾ ಮೇಳವನ್ನು ರಾತ್ರಿ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
9ರ ಶುಕ್ರವಾರ ಬೆಳಿಗ್ಗೆ 7ಕ್ಕೆ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ರಾತ್ರಿ 7.30ಕ್ಕೆ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸರ್ವ ಭಕ್ತಾದಿಗಳು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ದೇವಸ್ಥಾನ ಕಮಿಟಿಯ ಪ್ರಕಟಣೆ ತಿಳಿಸಿದೆ.