ಹೊನ್ನಾಳಿ:
ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವ ಶುಕ್ರವಾರ ಬೆಳಗ್ಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ದಾವಣಗೆರೆ, ಶಿವಮೊಗ್ಗ, ಹಾವೇರಿ, ಚಿತ್ರದುರ್ಗ ಮತ್ತಿತರ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ಆಗಮಿಸಿ, ರಥೋತ್ಸವದಲ್ಲಿ ಹರಕೆ, ಕಾಣಿಕೆ ಸಲ್ಲಿಸಿ ಕೃತಾರ್ಥರಾದರು. ಎಲ್ಲಾ ಭಕ್ತರಿಗೂ ಅನ್ನದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು.
ರಥೋತ್ಸವದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ 11.45ಕ್ಕೆ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು. 35 ಜೊತೆ ಮದುವೆಗಳು ನಡೆದವು. ರಾತ್ರಿ 8ಕ್ಕೆ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು.


ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಕಾರ್ತಿಕೋತ್ಸವದ ಪ್ರಯುಕ್ತ ಗುರುವಾರ ರಾತ್ರಿ 8ಕ್ಕೆ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಿಂದ ದೀಪ ರಥೋತ್ಸವ ಕಾರ್ಯಕ್ರಮ ವೈಭವದಿಂದ ನಡೆಯಿತು. ಶ್ರೀ ಗುರು ಗದ್ದಿಗೇಶ್ವರ ಸ್ವಾಮಿಯನ್ನು ಕೈಲಾಸ ಸಭಾ ಮಂಟಪಕ್ಕೆ ತಂದು ಪೀಠಾರೋಹಣ ಮಾಡಲಾಯಿತು.

Leave a Reply

Your email address will not be published. Required fields are marked *