ಹೊನ್ನಾಳಿ:
ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಹಾಗೂ ಸಕಾಲದಲ್ಲಿ ದೊರೆತ ರಕ್ತ ಜೀವರಕ್ಷಕ ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಎನ್‍ಎಸ್‍ಯುಐ, ಯುವ ಕಾಂಗ್ರೆಸ್ ಮತ್ತು ಡಿಜಿಎಸ್ ಅಭಿಮಾನಿಗಳ ಬಳಗದ ವತಿಯಿಂದ ತಾಲೂಕಿನ ಗೊಲ್ಲರಹಳ್ಳಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕೊರೊನಾ ಸಂದರ್ಭದಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿತ್ತು. ಕೊರೊನೋತ್ತರ ಕಾಲಘಟ್ಟದಲ್ಲಿ ಇದೀಗ ಪರಿಸ್ಥಿತಿ ಸುಧಾರಿಸಿದ್ದು, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ನೊಂದ ಜೀವಗಳನ್ನು ಉಳಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಯುವ ನಾಯಕರಾದ ಡಿ.ಎಸ್. ಪ್ರದೀಪ್‍ಗೌಡ, ಅರಕೆರೆ ಎ.ಎಲ್. ಅಮಿತ್, ಗೊಲ್ಲರಹಳ್ಳಿ ಕಿರಣ್ ಸೇರಿದಂತೆ 74 ಜನರು ರಕ್ತದಾನ ಮಾಡಿದರು. ರಕ್ತದಾನ ಮಾಡಿದ ಎಲ್ಲರಿಗೂ ಪ್ರಮಾಣಪತ್ರಗಳನ್ನು ಡಿ.ಜಿ. ಶಾಂತನಗೌಡ ವಿತರಿಸಿದರು.
ಶಿವಮೊಗ್ಗದ ಶ್ರೀ ವೈಷ್ಣವಿ ಚಾರಿಟಬಲ್ ಟ್ರಸ್ಟ್‍ನ ಆಶಾಜ್ಯೋತಿ ಸ್ವಯಂಪ್ರೇರಿತ ರಕ್ತ ಕೇಂದ್ರದ ವೈದ್ಯಾಧಿಕಾರಿ ಸಾಗರ್, ಮುಖಂಡರಾದ ಕೊಡತಾಳ್ ರುದ್ರೇಶ್, ಮನೋಜ್ ಇತರರು ಇದ್ದರು.