ದಾವಣಗೆರೆ ಡಿ.21: ದೌರ್ಜನ್ಯಕ್ಕೊಳಗಾದ ಸಂತ್ರಸ್ಥರಿಗೆ ಕೂಡಲೇ ನ್ಯಾಯ ಒದಗಿಸಲು ಹಾಗೂ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ  ಜರುಗಿದ  ನಾಲ್ಕನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೌರ್ಜನ್ಯವೆಸಗಿದವರಿಗೆ ಶಿಕ್ಷೆಯಾಗುವಂತೆ ಕ್ರಮವಹಿಸಬೇಕು. ದೌರ್ಜನ್ಯ ತಡೆ ಕಾಯ್ದೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಹಾಗೂ ಇಂತಹ ದೌರ್ಜನ್ಯ ಪ್ರಕರಣಗಳ ತಡೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ದೌರ್ಜನ್ಯ ಪ್ರಕರಣಗಳ ಸಂತ್ರಸ್ಥರಿಗೆ ನ್ಯಾಯ ಒದಗಿಸುವಲ್ಲಿ  ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಅಭಿಯೋಜನಾ ಇಲಾಖೆ  ಸಮನ್ವಯದಿಂದ ಕಾರ್ಯನಿರ್ವಹಿಸಿ, ಪ್ರಕರಣಗಳ ಶೀಘ್ರವಿಲೇವಾರಿಗೆ ಕ್ರಮವಹಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ ಅವರು, ದೌರ್ಜನ್ಯ ತಡೆ ಕಾಯ್ದೆಯಡಿ 2022 ರ ಸೆಪ್ಟೆಂಬರ್‍ಮಾಹೆಯಿಂದ ನವಂಬರ್ ಅಂತ್ಯದವರೆಗೆ ಹೊಸದಾಗಿ 13 ಪ್ರಕರಣಗಳು ದಾಖಲಾಗಿದ್ದು, ಈ ಅವಧಿಯಲ್ಲಿ ಸಂತ್ರಸ್ಥರಿಗೆ ರೂ.40.50 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿವಂತ ಅವರು ದೌರ್ಜನ್ಯ ಪ್ರಕರಣಗಳಲ್ಲಿ ದೂರು ದಾಖಲು ವಿವರ, ಪ್ರಕರಣಗಳ ವಿಲೇವಾರಿಯ ವಿವಿಧ ಹಂತಗಳ ಕುರಿತುಂತೆ ಸಭೆಗೆ ಮಾಹಿತಿ ನೀಡಿದರು.
   ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಚನ್ನಪ್ಪ,  ಜಾಗೃತ ಸಮಿತಿಯ ನಾಮನಿರ್ದೇಶಿತ ಸದಸ್ಯರು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *