ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಪ್ರಸಕ್ತ ೦೨೨-೨೩ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ನೇಕಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ನೋಂದಾಯಿತ ನೇಕಾರರ ಮಕ್ಕಳನ್ನು ಗುರುತಿಸುವ ಸಲುವಾಗಿ ಆನ್ಲೈನ್ ಮೂಲಕ ಸೇವಾ ಸಿಂಧು ತಂತ್ರಾAಶದ ಕರ್ನಾಟಕ ಒನ್ ಮತ್ತು ಗ್ರಾಮ ಒನ್ರಲ್ಲಿ ಮಾತ್ರ ಈ ಸೇವೆ ಲಭ್ಯವಿರುತ್ತದೆ. ಅದರಂತೆ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬೇಕು. ನಂತರ ವಿದ್ಯಾರ್ಥಿ ವೇತನಕ್ಕಾಗಿ ನೇಕಾರರ ಮಕ್ಕಳು ರಾಜ್ಯ ವಿದ್ಯಾರ್ಥಿ ವೇತನ(SSP)ರಲ್ಲಿ ಆನ್ಲೈನ್ ಮೂಲಕ ಪ್ರತ್ಯೇಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಿಳಾಸ ಉಪ ನಿರ್ದೇಶಕರ ಕಚೇರಿ, ರಾಮಾಂಜನೇಯ ಪ್ಲಾಜಾ, ಕಾಲೇಜ್ರಸ್ತೆ, ನಿಟುವಳ್ಳಿ, ದಾವಣಗೆರೆ-೫೭೭೦೦೪ ಸಂಪರ್ಕಿಸಲು ಕೋರಲಾಗಿದೆ.