ಕೃಷಿ ಇಲಾಖೆಯಿಂದ ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023ರ ಅಂಗವಾಗಿ ಜ.02 ರಂದು ದಾವಣಗೆರೆ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಸಿರಿಧಾನ್ಯ ಜಾಥಾ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಸಿರಿಧಾನ್ಯ ರಸಪ್ರಶ್ನೆ ಕಾರ್ಯಕ್ರಮ ಜರುಗಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಕೃಷಿ ಇಲಾಖೆ ಅಧಿಕಾರಿಗಳು, ರೈತರು, ಶಿಕ್ಷಕರು, ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಿರಿಧಾನ್ಯಗಳ ಉಪಯೋಗದ ವಿವಿಧ ವಾಕ್ಯಗಳನ್ನು ಘೋಷಣೆ ಕೂಗುತ್ತಾ ಸಂಚರಿಸಿದರು.
ಜಾಥಾದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಧರಮೂರ್ತಿ ಡಿ.ಎಂ. ರೈತರು ಮತ್ತು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, 2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಣೆ ಮಾಡಲಾಗಿದೆ. ರೈತರು ಮತ್ತು ಸಾರ್ವಜನಿಕರಲ್ಲಿ ಸಿರಿಧಾನ್ಯ ಬೆಳೆಗಳ ಪ್ರಾಮುಖ್ಯತೆಯನ್ನು ತಿಳಿಸುವ ಉದ್ದೇಶದಿಂದ ಈ ಜಾಥಾ ಆಯೋಜಿಸಲಾಗಿದೆ. ಅತಿ ಕಡಿಮೆ ಖರ್ಚಿನಲ್ಲಿ ಸಿರಿಧಾನ್ಯ ಬೆಳೆಗಳನ್ನು ಬೆಳೆಯಬಹುದಾಗಿದೆ. ಸಿರಿಧಾನ್ಯ ಆಹಾರವಾಗಿ ಸೇವಿಸುವುದರಿಂದ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ ಎಂದು ಹೇಳಿದರು.
ಸರ್ಕಾರದಿಂದ ಸಿರಿಧಾನ್ಯ ಬೆಳೆದ ರೈತರಿಗೆ ಪ್ರತಿ ಹೆಕ್ಟೇರಿಗೆ ರೂ.10000/-ಗಳನ್ನು ನೇರವಾಗಿ ರೈತರ ಖಾತೆಗೆ ರೈತ ಸಿರಿ ಯೋಜನೆಯಡಿ ಜಮೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಕೃಷಿ ಇಲಾಖೆಯಿಂದ ಸಿರಿಧಾನ್ಯ ಬೆಳೆದ ರೈತರ ಹೊಲದಲ್ಲಿ ಸಿರಿಧಾನ್ಯ ಕ್ಷೇತ್ರೋತ್ಸವ ಮಾಡುವ ಉದ್ದೇಶವಿದೆ ಎಂದರು.
ಕೃಷಿಇಲಾಖೆಯ ಉಪ ನಿರ್ದೇಶಕರಾದ ಆರ್. ತಿಪ್ಪೇಸ್ವಾಮಿ ಶಾಲೆಯ ಮಕ್ಕಳಿಗೆ ಸಿರಿಧಾನ್ಯ ಆಹಾರ ಮತ್ತು ಅವುಗಳ ಮಹತ್ವ ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀಆಂಜನೇಯ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಲಿತಾಬಾಯಿ ಹಾಗೂ ಶಿಕ್ಷಕರು, ಆನಗೋಡು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶ್ರೀನಿವಾಸ ಸಹಾಯಕ ಕೃಷಿ ಅಧಿಕಾರಿ ಆರ್, ರವಿಕುಮಾರ್ ಎ.ವಿ., ಎಂ. ಸಿಬ್ಬಂದಿಗಳಾದ ವೆಂಕಟೇಶ್ ಮತ್ತು ರೇಷ್ಮಾ ಹಾಗೂ ಗಣೇಶ್ ಹಾಜರಿದ್ದರು.