ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಂತರದ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಪ್ರಕಟಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ 17,276 ಮತದಾರರು ಹೆಚ್ಚಳವಾಗಿದ್ದಾರೆ. ಪರಿಷ್ಕರಣೆಗೆ ಮುಂಚೆ 13,88,434 ಮತದಾರರಿದ್ದರು ಎಂದು ಹೇಳಿದರು.
ಪರಿಷ್ಕರಣೆ ನಂತರ ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ 1,89,209, ಹರಿಹರದಲ್ಲಿ 2,02,813, ದಾವಣಗೆರೆ ಉತ್ತರದಲ್ಲಿ 2,32,014, ದಕ್ಷಿಣದಲ್ಲಿ 2,04,442, ಮಾಯಕೊಂಡದಲ್ಲಿ 1,87,676, ಚನ್ನಗಿರಿಯಲ್ಲಿ 1,95,797 ಹಾಗೂ ಹೊನ್ನಾಳಿಯಲ್ಲಿ 1,93,763 ಮತದಾರರಿದ್ದಾರೆ.
ಪುರುಷ ಮತದಾರರ ಸಂಖ್ಯೆ 7,05,23, ಮಹಿಳಾ ಮತದಾರರು 7,00,357 ಹಾಗೂ ಇತರರು 120. ಜಿಲ್ಲೆಯಲ್ಲಿ ಪ್ರತಿ ಸಾವಿರ ಪುರುಷ ಮತದಾರರಿಗೆ 993 ಮಹಿಳಾ ಮತದಾರರಿದ್ದಾರೆ ಎಂದವರು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿದ್ದು, 103-ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ 262 ಮತಗಟ್ಟೆಗಳು, 262 ಮತಗಟ್ಟೆ ಅಧಿಕಾರಿಗಳು, 26 ಮೇಲ್ವಿಚಾರಕರು, 105-ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ 228 ಮತಗಟ್ಟೆಗಳು, 228 ಮತಗಟ್ಟೆ ಅಧಿಕಾರಿಗಳು, 24 ಮೇಲ್ವಿಚಾರಕರು, 106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 242 ಮತಗಟ್ಟೆಗಳು, 242 ಅಧಿಕಾರಿಗಳು, 23 ಮೇಲ್ವಿಚಾರಕರು, 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 212 ಮತಗಟ್ಟೆಗಳು, 212 ಮತಗಟ್ಟೆ ಅಧಿಕಾರಿಗಳು, 20 ಮೇಲ್ವಿಚಾರಕರು, 108-ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ 240 ಮತಗಟ್ಟೆಗಳು, 240 ಮತಗಟ್ಟೆ ಅಧಿಕಾರಿಗಳು, 24 ಮೇಲ್ವಿಚಾರಕರು, 109-ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ 254 ಮತಗಟ್ಟೆಗಳು, 254 ಮತಗಟ್ಟೆ ಅಧಿಕಾರಿಗಳು, 25 ಮೇಲ್ವಿಚಾರಕರು, ಮತ್ತು 110-ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ 245 ಮತಗಟ್ಟೆಗಳು, 245 ಮತಗಟ್ಟೆ ಅಧಿಕಾರಿಗಳು, 24 ಮೇಲ್ವಿಚಾರಕ ಅಧಿಕಾರಿಗಳನ್ನು ಹೊಂದಿದ್ದು, ಒಟ್ಟಾರೆಯಾಗಿ 1683 ಮತಗಟ್ಟೆಗಳು, 1683 ಮತಗಟ್ಟೆ ಅಧಿಕಾರಿಗಳು, 166 ಮೇಲ್ವಿಚಾರಕರ ಅಧಿಕಾರಿಗಳನ್ನು ಒಳಗೊಂಡಿದೆ ಎಂದು ಹೇಳಿದರು.
ಜಗಳೂರು ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ವಿವರ: 103-ಜಗಳೂರು ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯಾಗಿ ಉಪವಿಭಾಗದ ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಜಗಳೂರು ತಹಶೀಲ್ದಾರ್ ದೂ.ಸಂ. 08196-227242.
105-ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಜಿಲ್ಲಾ ಉಪ ವಿಭಾಗಾಧಿಕಾರಿ ಮತ್ತು ಸಹಾಯಕ ಮತದಾರರ ನೊಂದಣಾಧಿಕಾರಿಯಾಗಿ ಹರಿಹರ ತಹಶೀಲ್ದಾರ್ ದೂ. ಸಂ.08192-242777
106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಸಹಾಯಕ ನೊಂದಣಾಧಿಕಾರಿಯಾಗಿ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ದೂ.ಸಂ.08192-236566
107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಮಹಾನಗರ ಪಾಲಿಕೆ ಪರಿಷತ್ ಕಾರ್ಯದರ್ಶಿ ದೂ.ಸಂ.08192-236566
108- ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ದಾವಣಗೆರೆ ಉಪ ವಿಭಾಗಾಧಿಕಾರಿ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ತಹಶೀಲ್ದಾರ್ ದೂ. ಸಂ. 08192-235344
109-ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಹೊನ್ನಾಳಿಯ ಉಪವಿಭಾಗಾಧಿಕಾರಿ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಚನ್ನಗಿರಿ ತಹಶೀಲ್ದಾರ್ ದೂ.ಸಂ.08189-228025
110-ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಹೊನ್ನಾಳಿಯ ಉಪ ವಿಭಾಗಾಧಿಕಾರಿ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಹೊನ್ನಾಳಿ ತಹಶೀಲ್ದಾರ್ ದೂ. ಸಂ. 081888-251025
ಪ್ರತಿಯೊಬ್ಬ ಮತದಾರನು ಅಂತಿಮ ಮತದಾರರ ಪಟ್ಟಿಯಲ್ಲಿ ತನ್ನ ಹೆಸರಿನ ನೋಂದಣಿ ಪರಿಶೀಲಿಸಿಕೊಳ್ಳಬಹುದು. ಎಫಿಕ್ ಹೊಂದಿರುವ ಮತದಾರರು ಹಾಗೂ ಹಿಂದಿನ ಸಾಲಿನ ಮತದಾರರ ಪಟ್ಟಿಯಲ್ಲಿ ಹೆಸರಿದ್ದ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ದೃಡಪಡಿಸಿಕೊಳ್ಳಬಹುದು. ಒಂದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಮಾತ್ರ ಹೆಸರು ನೊಂದಾಯಿತಿಸಿಕೊಂಡಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
ಭಾರತ ಚುನಾವಣಾ ಆಯೋಗದ ಸುತ್ತೋಲೆಯಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಟ್ಟಿಗೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ್ಕೆ 10 ದಿನದ ಮುಂಚಿನವರೆಗೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಮತದಾರರ ಪಟ್ಟಿಯಲ್ಲಿ ಈವರೆಗೆ ನೋಂದಣಿಯಾಗದ ಹಾಗೂ ದಿ:01.01.2024ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರು ತಮ್ಮ ಹೆಸರನ್ನು ನೊಂದಾಯಿಸಲು ನಿರ್ದಿಷ್ಟ ಪಡಿಸಿದ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
ಮತದಾರರ ಹೆಸರು ನೋಂದಾಯಿಸಲು ತೆಗೆದುಹಾಕಲು ತಿದ್ದುಪಡಿ ಮಾಡಲು ಹಾಗೂ ಸ್ಥಳಾಂತರಕ್ಕಾಗಿ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬಹುದು.
ಮೇಲ್ಕಂಡಂತೆ ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಗಿoಣeಡಿ ಊeಟಠಿಟiಟಿe ಚಿಠಿಠಿ (ಗಿಊಂ) hಣಣಠಿ://voಣeಡಿಠಿoಡಿಣಚಿಟ.eಛಿi.gov.iಟಿ oಡಿ hಣಣಠಿ://ತಿತಿತಿ.ಟಿvsಠಿ.iಟಿ ಸಲ್ಲಿಸಬಹುದು. ವಿದೇಶಗಳಲ್ಲಿ ಉದ್ಯೋಗ/ಶಿಕ್ಷಣದ ನಿಮಿತ್ತ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ನಮೂನೆ 6ಎರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಧಿಸಿದ ಮತದಾರರ ನೋಂದಾಣಾಧಿಕಾರಿಗಳಿಗೆ ಅಂಚೆ/ಆನ್ ಲೈನ್ ಮೂಲಕ ಸಲ್ಲಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಒಬ್ಬ ಮತದಾರ ಒಂದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಮಾತ್ರ ಹೆಸರು ನೋಂದಾಯಿಸಿಕೊಳ್ಳಬೇಕು ಹಾಗೂ ಮತದಾರರ ಪಟ್ಟಿಯಲ್ಲಿ ಈವರೆಗೆ ನೋಂದಣಿ ಯಾಗದ ಹಾಗೂ ದಾರರು ತಮ್ಮ ಹೆಸರನ್ನು ನೋಂದಾಯಿಸಲು ನಿರ್ದಿಷ್ಟಪಡಿಸಿದ ನಮೂನೆಯಲ್ಲಿ (ಗಿoಣeಡಿ ಊeಟಠಿಟiಟಿe ಂಠಿಠಿ)ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮತದಾರರ ಉಚಿತ ಸಹಾಯವಾಣಿ 1950 ಅಥವಾ 08192-272953 ನ್ನು ಸಂಪರ್ಕಿಸಬಹುದೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ ಮುದ್ದಜ್ಜಿ, ಚುನಾವಣಾ ಸಮನ್ವಯ ಅಧಿಕಾರಿ ರೇμÁ್ಮ ಹಾನಗಲ್ ಇತರರಿದ್ದರು.