ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಇದೇ ಜನವರಿ 18ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
7 ತಜ್ಞ ವೈದ್ಯರು ಮತ್ತು 5 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.