ನ್ಯಾಮತಿ : ಮನುಷ್ಯ ಧರ್ಮದ ದಾರಿಯಲ್ಲಿ ನಡೆದಾಗ ಭಗವಂತನ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ತಾಲೂಕಿನ ಎಂ.ಜಿ.ಹಳ್ಳಿ,ಕೋಟೆಹಾಳ್,ವೆAಕಟೇಶ್ ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆಯವರು ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಸತ್ಯನಾರಾಯಣ ಪೂಜೆ ನಡೆಸಿ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆಂದರು.
ಲೋಕಕ್ಕೆ ಸನ್ಮಂಗಳವನ್ನು ಉಂಟು ಮಾಡುವ ದೃಷ್ಟಿಯಿಂದ, ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಮ್ಮಿಕೊಂಡಿದ್ದು, ಈ ಮೂಲಕ ಲೋಕಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತೇನೆಂದರು.
ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆಯವರು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರಲ್ಲದೇ, ದುಡಿಯುವ ಕೈಗಳಿಗೆ ಸಾಲದ ಮೂಲಕ ಹಣ ನೀಡಿ ಅವರ ಕೈಗಳಿಗೆ ಉದ್ಯೋಗ ನೀಡುವ ಕೆಲಸವನ್ನು ಮಾಡುತ್ತಿದ್ದು ನಿಜಕ್ಕೂ ಶ್ಲಾಘನೀಯ ಎಂದರು.
ಸಾಮೂಹಿಕ ಸತ್ಯನಾರಾಯಣ ಪೂಜೆ : ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ೭೫೦ ಹೆಚ್ಚು ಮಹಿಳೆಯರು, ೫೧ ಜೋಡಿ ವ್ರಥಾದಾರಿಗಳು ಪಾಲ್ಗೊಂಡು ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿಸಿ, ಲೋಕಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸಿದರು.
ಈ ಸಂದರ್ಭ ವಿಶ್ವರಾಧ್ಯ ಹಾಲಸ್ವಾಮಿಗಳು ಆಶೀರ್ವಚನ ನೀಡಿದರು, ಕಾರ್ಯಕ್ರಮದಲ್ಲಿ ಸುರೇಶ್ ಹೊಸಕೇರಿ ನಿಕಟಪೂರ್ವ ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷರು, ಜನಜಾಗೃತಿ ವೇದಿಕೆ ಸದಸ್ಯ ಕುಮಾರ್ ಸ್ವಾಮಿ,ತಾಲೂಕು ಯೋಜನಾಧಿಕಾರಿ ಬಸವರಾಜ್ ಅಂಗಡಿ, ಗ್ರಾ.ಪಂ ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಗ್ರಾಮದ ಮುಖಂಡರಿದ್ದರು.