ದಾವಣಗೆರೆ; ಜ.16 : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು, 2021ರ ಅನುಸಾರ ಏಕ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ನಗರ ಪಾಲಿಕೆ ವ್ಯಾಪ್ತಿಗೆ ಬರುವ ಸಾರ್ವಾಜನಿಕ ಉದ್ದಿಮೆಗಳು, ಹೋಟೆಲ್ಗಳು, ಬಾರ್ ಹಾಗೂ ರೆಸ್ಟೋರೆಂಟ್, ಬೀದಿಬದಿ ವ್ಯಾಪಾರಿಗಳು, ಕಿರಾಣಿ ಅಂಗಡಿಗಳು, ಚೌಟ್ರಿಗಳು, ಮಾಲ್ಗಳು, ಮಾಂಸದಂಗಡಿಗಳು, ಬೇಕರಿ ಸ್ಟಾಲ್ಗಳು, ಬಟ್ಟೆ ವ್ಯಾಪಾರಿಗಳು, ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್ ನೀಷೇಧವನ್ನು ಕಡ್ಡಾಯವಾಗಿ ಪಾಲಿಸಬೇಕು.
ಈ ಆದೇಶವನ್ನು ಉಲ್ಲಂಘಿಸಿದರೆ ಘನತ್ಯಾಜ್ಯ ನಿರ್ವಹಣಾ ಉಪ ನಿಯಮ-2019ರಡಿ ದಂಡ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.