ಶ್ರೀ ಸಂತ ಸೇವಾಲಾಲ್ ಮಹಾರಾಜರ 284ನೇ ಜನ್ಮ ದಿನಾಚರಣೆ ಪ್ರಯುಕ್ತ ಜಾತ್ರಾ ಮಹೋತ್ಸವ ಆಚರಣೆಯ ಕುರಿತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಇವರ ಅಧ್ಯಕ್ಷತೆಯಲ್ಲಿ ಜ.20 ರಂದು ಬೆಳಿಗ್ಗೆ 11 ಗಂಟೆಗೆ ಭಾಯಗಡ್ ಸೂರಗೊಂಡನಕೊಪ್ಪದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.