ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ಸಿ ವೃಂದದ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯೋಜಿಸುವ ಸ್ಪರ್ಧಾತ್ಮಕ ಪರೀಕ್ಷೆಯ ತಿದ್ದುಪಡಿ ಆದೇಶ ಪ್ರಕಟಿಸಲಾಗಿದೆ.
ತಿದ್ದುಪಡಿ ಆದೇಶದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ-1 , ಸಾಮಾನ್ಯ ಜ್ಞಾನ ಹಾಗೂ ಪ್ರಶ್ನೆ ಪತ್ರಿಕೆ-2 ಸಾಮಾನ್ಯ ಕನ್ನಡ/ಸಾಮಾನ್ಯ ಇಂಗ್ಲಿಷ್/ ಕಂಪ್ಯೂಟರ್ ಜ್ಞಾನ ಎಂದು ಓದಿಕೊಳ್ಳಬೇಕು. ಈ ಕುರಿತಂತೆ ಕರ್ನಾಟಕ ರಾಜ್ಯ ಪತ್ರ 13 ದಿನಾಂಕ 13-01-2023ರ ಸಂಚಿಕೆ 215 ಭಾಗ 5ರಲ್ಲಿ  ಪರೀಕ್ಷಾರ್ಥಿಗಳು ಪೂರ್ಣ ಮಾಹಿತಿಯನ್ನು ಪಡೆಯಲು ಕೋರಲಾಗಿದೆ.
ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿ ದೂ. ಸಂ. 08182-220925 ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ  ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===

Leave a Reply

Your email address will not be published. Required fields are marked *