ನ್ಯಾಮತಿ ;,ತಾಲೂಕು ಸೂರಗೊಂಡನ ಕೊಪ್ಪ ಗ್ರಾಮ ದಲ್ಲಿರುವ ಶ್ರೀ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿಯ ಜಾತ್ರೆ ಫೆ 13 ರಿಂದ 15 ರವರೆಗೆ ಜಾತ್ರಾ ಮಹೋತ್ಸವ ನಡೆಯುವ ಅಂಗವಾಗಿ ಪೂರ್ವಭಾವಿ ಸಭೆಯನ್ನು ರಾಜ್ಯತಾಂಡ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಕುಡುಚಿ ಕ್ಷೇತ್ರದ ಶಾಸಕ ಪಿ ರಾಜು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತ್ರದಲ್ಲಿ ಸಭೆ ನಡೆಸಲಾಯಿತು. ರಾಜ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ ರಾಜೀವ್ ಪೂರ್ವಬಾವಿ ಸಿದ್ಧತೆ ಬಗ್ಗೆ ಸಭೆಯಲ್ಲಿ ಮಾತನಾಡಿ, ಈ ವರ್ಷ 284ನೇ ಶ್ರೀ ಸಂತಾನ ಸೇವಾಲಾಲ್ ಮತ್ತು ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತಾದಿಗಳು ಹಾಗೂ ಮಾಲಾಧಾರಿಗಳು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರುಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲ ಸೌಕರ್ಯಗಳಾದ ಸಾರಿಗೆ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ, ಊಟದ ವ್ಯವಸ್ಥೆ, ವಿದ್ಯುತ್ ದ್ವೀಪದ ವ್ಯವಸ್ಥೆ ಇನ್ನೂ ಮುಂತಾದ ಮೂಲ ಸೌಕರ್ಯಗಳ ಒದಗಿಸುವಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಶಿವಾನಂದ್ ಕಾಪಶಿಯವರು ಸಭೆಯನ್ನ ಉದ್ದೇಶಿಸಿ ಮಾತನಾಡಿ ಸೇವಾಲಾಲ್ ಜಯಂತೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ಮಾಲಾಧಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎಂಪಿ ರೇಣುಕಾಚಾರ್ಯ ರವರು ಮತ್ತು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ ರಾಜೀವ್ ,ಜಿಲ್ಲಾಧಿಕಾರಿಗಳಾದ ಶಿವಾನಂದ ಕಾಪಶಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ನಾಗರಾಜ್ ನೇತೃತ್ವದಲ್ಲಿ ಸೌಳಂಗ ಮತ್ತು ಸಾಲಬಾಳ್ ಮುಖ್ಯ ರಸ್ತೆಯ ಅಕ್ಕಪಕ್ಕದಲ್ಲಿರುವ ಖಾಲಿ ಇರುವ ಜಮೀನನ್ನು ಗುರುತಿಸಲಿಕ್ಕೆ ತೆರಳಿ ಸ್ಥಳ ಪರಿಶೀಲಿಸಿದರು.
ಸ್ಥಳ ಪರಿಶೀಲಿಸಿ ಮಾತನಾಡಿದ ಸಿಎಂ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಮಾತನಾಡಿ ಫೆಬ್ರುವರಿ ತಿಂಗಳಲ್ಲಿ ತಾಂಡ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲಿಕ್ಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಈ ಕಾರ್ಯಕ್ರಮಕ್ಕೆ ಪಿಎಂ ನರೇಂದ್ರ ಮೋದಿ ಅಥವಾ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಯಿತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ತಾಂಡಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಚಂದ್ರನಾಯ್ಕ, ಡಿ ವೈ ಎಸ್ ಪಿ ,ಆರ್ ಜಿ ಬಸರಿಗೆ ,ಜಿಪಂ ಸಿಇಒ ಡಾ. ವಿ ಚೆನ್ನಪ್ಪ ,ಉಪ ನಿರ್ದೇಶಕ ನಾಗರಾಜ್ ,ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ತಹಶೀಲ್ದಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಭಾಗಿಯಾಗಿದ್ದರು.