ಜಿಲ್ಲಾಡಳಿತ ವತಿಯಿಂದ ಜ. 26 ರ ಗುರುವಾರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಜರುಗಲಿದೆ.
 ರಾಷ್ಟ್ರ ಧ್ವಜಾರೋಹಣವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ (ಭೈರತಿ)  ನೆರವೇರಿಸುವರು. ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು.
ಲೋಕಸಭಾ ಕ್ಷೇತ್ರದ ಸಂಸದರಾದ ಜಿ. ಎಂ. ಸಿದ್ದೇಶ್ವರ, ಚನ್ನಗಿರಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ. ಮಾಡಾಳ್ ವಿರೂಪಾಕ್ಷಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ, ಜಗಳೂರು ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್. ವಿ. ರಾಮಚಂದ್ರ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ. .ನಾರಾಯಣಸ್ವಾಮಿ,  ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ ಗೌರವಾನ್ವಿತ ಉಪಸ್ಥಿತರಾಗಿ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನಸಭಾ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ರಾಮಪ್ಪ, ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಆರ್.ಶಂಕರ್, ಚಿದಾನಂದ.ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್ ನಾಯಕ,  ಮಹಾನಗರ ಪಾಲಿಕೆ ಮಹಾಪೌರರಾದ ಆರ್ ಜಯಮ್ಮ, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಪ್ರಕಾಶ್ ಎ. ವೈ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎ ಚನ್ನಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ , ಪಾಲಿಕೆಯ ಆಯುಕ್ತರಾದ ರೇಣುಕಾ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *