ಜಿಲ್ಲಾಡಳಿತ ವತಿಯಿಂದ ಪೌರಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜರ್ ನಿಷೇಧ 2013 ರ ಕುರಿತಂತೆ ಅರಿವು ಮತ್ತು ತರಬೇತಿ ಕಾರ್ಯಕ್ರಮವನ್ನು ಇದೇ ಫೆಬ್ರವರಿ 10 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
 ಜಿಲ್ಲಾಧಿಕಾರಿಗಳ ಕಚೇರಿ  ಸಭೆಯಲ್ಲಿ ಶುಕ್ರವಾರ ಜರುಗಿದ ಪೌರ ಕಾರ್ಮಿಕರ ಪ್ರತಿಭಾ ಪುರಸ್ಕಾರ ಸಮಾರಂಭದ ಪೂರ್ವ ಸಿದ್ಧತಾ ಸಭೆಯಲ್ಲಿ  ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಅಚ್ಚುಕಟ್ಟುಗಿ ಕಾರ್ಯಕ್ರಮ ಆಯೋಜನೆಗೆ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *