ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಮತ್ತು ಸಿಬ್ಬಂದಿ ವಸತಿ ಗೃಹಗಳ ಉದ್ಘಾಟನಾ ಸಮಾರಂಭ ಹಾಗೂ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಕಟ್ಟಡದ ಶಂಕುಸ್ಥಾಪನಾ ಸಮಾರಂ¨ಫೆ.05 ರಂದು ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ.
  ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ಇವರ ವತಿಯಿಂದ ಆಯೋಜಿಸಲಾದ್ದ ಕಾರ್ಯಕ್ರಮಕ್ಕೆ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಉದ್ಘಾಟಿಸುವರು ಹಾಗೂ ಶಂಕುಸ್ಥಾಪನೆಯನ್ನು ನೆರೆವೇರಿಸುವರು. ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆವಹಿಸುವರು.
  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ ಸುಧಾಕರ ಘನ ಉಪಸ್ಥಿತಿ ವಹಿಸಲಿದ್ದಾರೆ.
  ಸಂಸದರಾದ ಜಿ.ಎಂ. ಸಿದ್ದೇಶ್ವರ, ಚನ್ನಗಿರಿ ವಿಧಾನಸಭಾ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಜಗಳೂರು ವಿಧಾನಸಭಾ ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಮಾಯಾಕೊಂಡ ಕ್ಷೇತ್ರದ ಶಾಸಕರು ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮತ ಅಧ್ಯಕ್ಷರಾದ ಪ್ರೊ.ಎನ್ ಲಿಂಗಣ್ಣ ಗೌರವಾನ್ವಿತ ಉಪಸ್ಥಿತರಾಗಿ ಭಾಗವಹಿಸುವರು.
       ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಶಾಮನೂರು ಶಿವಶಂಕರಪ್ಪ, ಎಸ್.ರಾಮಪ್ಪ, ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ತೇಜಸ್ವಿನಿಗೌಡ ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಆರ್.ಶಂಕರ್,  ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಬಸವರಾಜ ನಾಯ್ಕ ಪಾಲಿಕೆ ಆಯುಕ್ತರಾದ ಆರ್ ಜಯಮ್ಮ, ದೂಡ ಅಧ್ಯಕ್ಷರಾದ ಪ್ರಕಾಶ ಎ.ವೈ, ಪಾಲಿಕೆ ಸದಸ್ಯರಾದ ಪ್ರಸನ್ನ ಕುಮಾರ್.ಕೆ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ

Leave a Reply

Your email address will not be published. Required fields are marked *