ನ್ಯಾಮತಿ ;ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ 2020 -2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಿಕ್ಷಣಾಧಿಕಾರಿ ನಂಜರಾಜು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ ಪಿ ರೇಣುಕಾಚಾರ್ಯರವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳ ಬಾಲ್ಯದ ಜೀವನದಲ್ಲಿ ಸರಿಯಾಗಿ ರೀತಿ ವಿದ್ಯಾಭ್ಯಾಸವನ್ನು ಮಾಡಿ ಉನ್ನತ ಶಿಕ್ಷಣವನ್ನು ಪಡೆದು ವಿದ್ಯೆಯ ಜೊತೆಗೆ ಆಟ ಪಾಠ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗಿಯಾದಾಗ ಮನಸ್ಸಿಗೆ ಮುದ ತಂದುಕೊಡುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಹರೀಶ್ ಗೌಡ ,ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರೇಯಮ್ಮ ,ಎಲ್ ನಾಗರಾಜ್ ಎಸ್ ಡಿ ಎಂ ಸಿ ಅಧ್ಯಕ್ಷ ಜಿ ಎಚ್ ಪರಮೇಶ್ವರಪ್ಪ, ನೌಕರ ಸಂಘದ ಅಧ್ಯಕ್ಷ ಬಸವರಾಜ್ ಬಾವಿ, ದೈಹಿಕ ಶಿಕ್ಷಣಾಧಿಕಾರಿ ಈಶ್ವರಪ್ಪ ,ಸಿ ಆರ ಪಿನಾಗೇಶ್. ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕಿಯರು ಹಾಗೂ ಶಾಲಾ ವಿದ್ಯಾರ್ಥಿಗಳು ಸಹ ಉಪಸ್ಥಿತಿಯಲ್ಲಿದ್ದರು.