ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, £ಗÀರಾಭಿವೃದ್ಧಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ೨೦೧೩ರ ಎಂ.ಎಸ್.ಕಾಯ್ದೆಯ ಕುರಿತು ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಫೆ. ೧೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಭೈರತಿ) ಕಾರ್ಯಕ್ರಮವನ್ನು  ಉದ್ಘಾಟಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಸದಸ್ಯರಾದ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು.
ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ. ಶಿವಣ್ಣ ಕೋಟೆ ಉಪಸ್ಥಿತರಿರುವರು.
ಲೋಕಸಭಾ ಸದಸ್ಯರಾದ ಡಾ.ಜಿ.ಎಂ.ಸಿದ್ದೇಶ್ವರ, ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನಸಭಾ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ರಾಮಪ್ಪ, ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುAಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಆರ್.ಶಂಕರ್, ಚಿದಾನಂದ.ಎA.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್ ನಾಯ್ಕ,  ಮಹಾನಗರ ಪಾಲಿಕೆ ಮಹಾಪೌರರಾದ ಆರ್ ಜಯಮ್ಮ, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಕೆ.ಎಂ.ಸುರೇಶ್ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *