ಸಂತ ಸೇವಾಲಾಲ್‍ರವರ 284ನೇ ಜಯಂತ್ಸೋವ ಹಾಗೂ ವಿವಿಧ ಕಟ್ಟಡಗಳ ಉದ್ಘಾಟನಾ ಸಮಾರಂಭ ಇದೇ ಫೆಬ್ರವರಿ.14 ರಂದು ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕು ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಬೆಂಗಳೂರು ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಅಂದು ಮಧ್ಯಾಹ್ನ 02 ಗಂಟೆಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್ ಬೊಮ್ಮಯಿ ಅವರು ಉದ್ಘಾಟಿಸಲಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀ ಕೋಟ ಶ್ರೀನಿವಾಸ ಅವರು ಧರ್ಮಶಾಲಾ ಕಟ್ಟಡ ಕಾಮಗಾರಿಯ ಮೊದಲನೇ ಮಹಡಿಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೈರತಿ ಅವರು ಸಿಬ್ಬಂದಿ ವಸತಿ ಗೃಹಗಳ ಕಟ್ಟಡ ಕಾಮಗಾರಿಯ ಉದ್ಘಾಟನೆಯನ್ನು ಮಾಡಲಿದ್ದಾರೆ. ಪಶುಸಂಗೋಪನಾ ಸಚಿವರಾದ ಪ್ರಭು ಬಿ ಚವ್ಹಾಣ್ ನವೀಕರಿಸಿದ ಸಂತ ಸೇವಾಲಾಲ್ ರವರ ಗರ್ಭಗುಡಿ ಉದ್ಘಾಟಿಸುವರು. ಕುಡುಚಿ ಶಾಸಕರು ಹಾಗೂ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಿ ರಾಜೀವ್ ಬಸ್ ಟರ್ಮಿನಲ್ ಕಟ್ಟಡದಲ್ಲಿ ನಿರ್ಮಾಣವಾಗಿರುವ ಮಳಿಗೆಗಳನ್ನು ಉದ್ಘಾಟಿಸುವರು.
ಇಂಧನ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ಕಲಾ ತಂಡಗಳ ಪ್ರಾಯೋಕರಾಗಿರುವರು. ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ಉಪಸ್ಥಿತರಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ್, ಸರ್ಕಾರಿ ಮುಖ್ಯ ಸಚೇತಕರು ಡಾ.ವೈ.ಎ ನಾರಾಯಣಸ್ವಾಮಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಪ್ರಕಾಶ್ ಕೆ.ರಾಠೋಡ್, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರಾದ ಕೆ. ಮಾಡಾಳ್ ವಿರುಪಾಕ್ಷಪ್ಪ, ಜಗಳೂರು ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಧ್ಯಕ್ಷರಾದ ಎಸ್.ವಿ ರಾಮಚಂದ್ರ, ಮಾಯಾಕೊಂಡ ಕ್ಷೇತ್ರದ ಶಾಸಕರು ಹಾಗೂ ಡಾ.ಬಾಬು ಜಗಜೀವನ್ ರಾವ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪ್ರೊ.ಲಿಂಗಣ್ಣ, ಸಂಸದರು ಹಾಗೂ ಸಂತಸೇವಾಲಾಲ್ ಪ್ರತಿಷ್ಠಾನದ ಸದಸ್ಯರಾದ ಡಾ.ಜಿ.ಎಂ ಸಿದ್ದೇಶ್ವರ ಮಾಜಿ ಸಚಿವರು ಹಾಗೂ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಮತ್ತು ಎಸ್.ಎ ರವೀಂದ್ರನಾಥ್, ಎಸ್.ರಾಮಪ್ಪ, ಮೋಹನ್ ಕುಮಾರ್ ಕೊಂಡಜ್ಜಿ, ರವಿಕುಮಾರ್.ಎನ್, ಆಯನೂರು ಮಂಜುನಾಥ್, ವಿದಾನಂದ್ ಎಂ ಗೌಡ, ಡರುಣ್, ಕೆ ಅಬ್ದುಲ್ ಜಬ್ಬಾರ್, ಕೆ.ಪಿ ನಂಜುಂಡಿ ವಿಶ್ವಕರ್ಮ, ಡಾ.ತೇಜಸ್ವಿನಿಗೌಡ, ಎಸ್.ಎಲ್ ಬೋಜೆಗೌಡ, ಆರ್ ಶಂಕರ್, ಕೆ.ಎಸ್ ನವೀನ್, ಕೇಂದ್ರ ಪರಿಹಾರ ಸಮಿತಿಯ ಸದಸ್ಯರು ಹಾಗೂ ಅಧ್ಯಕ್ಷರಾದ ಬಸವರಾಜ್ ನಾಯಕ್, ಕಲಬುರಗಿ ಸಂಸದರಾದ ಡಾ.ಉಮೇಶ್ ಜಿ ಜಾಧವ್, ಶಿವಮೊಗ್ಗ ಜಿಲ್ಲೆ ಲೋಕಸಭಾ ಸಂಸದರು ಹಾಗೂ ಸಂತ ಸೇವಾಲಾಲ್ ಪ್ರತಿμÁ್ಠನದ ಸದಸ್ಯರಾದ ಬಿ.ವೈ ರಾಘವೇಂದ್ರ , ಹಗರಿಬೊಮ್ಮನಹಳ್ಳಿ ವಿಧಾನಸಭಾ ಶಾಸಕರಾದ ಎಸ್ ಭೀಮಾನಾಯ್ಕ್, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಬಿ ಅಶೋಕ್ ನಾಯ್ಕ್, ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಅವಿನಾಶ್ ಜಾಧವ್, ಹೂವಿನ ಹಡಗಲಿ ವಿಧಾನಸಭಾ ಶಾಸಕರಾದ ಪಿ.ಟಿ ಪರಮೇಶ್ವರ ನಾಯ್ಕ್, ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಮಪ್ಪ ಲಮಾಣಿ, ನಾಗಠಾಣ ವಿಧಾನಸಭಾ ಕ್ಷೇತ್ರದ ಶಾಸಕರಾದ ದೇವಾನಂದ್ ಫೂಲ್‍ಸಿಂಗ್ ಚೌಹಾಣ್, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಅಧ್ಯಕ್ಷರಾದ ರುದ್ರಪ್ಪ.ಎಂ.ಲಂಬಾಣಿ, ಚಿನ್ನಿಕಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಕವಿತಾ ಬಾಯಿಆರ್. ಯೋಗೇಶ್ ನಾಯ್ಕ್ ಪಾಲ್ಗೊಳ್ಳುವರು.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಎನ್..ಮಂಜುಳ, ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾದ ರಾಕೇಶ್ ಕುಮಾರ್. ಕೆ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಸಂತಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ ಸದಸ್ಯ ಕಾರ್ಯದರ್ಶಿಗಳು ಹಾಗೂ ಕ.ತಾ.ಅ.ನಿ.ನಿ, ವ್ಯವಸ್ಥಾಪಕ ನಿರ್ದೇಶಕರಾದ ಎಲ್.ಶಿವಶಂಕರ್ ನಾಯಕ್, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಮಹಾಪೋಷಕರಾದ ಬಿ. ಹೀರಾನಾಯ್ಕ, ಸಂತ ಸೇವಾಲಾಲ್ ಮಹಾಮಠ ನಿರ್ವಹಣಾ ಸಮಿತಿ(ರಿ) ಅಧ್ಯಕ್ಷರಾದ ಎಲ್.ಈಶ್ವರ್ ನಾಯ್ಕ, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನÀ ಕಾರ್ಯದರ್ಶಿಗಳಾದ ರಾಘವೇಂದ್ರನಾಯ್ಕ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.