ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ವತಿಯಿಂದ 2022-23ನೇ ಸಾಲಿನ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ (10+01) ಅನುಷ್ಠಾನಕ್ಕಾಗಿ ನಿಗಮದ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ 18 ರಿಂದ 60 ವರ್ಷ ವಯೋಮಾನದ ಸದಸ್ಯರಿಂಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 24 ರೊಳಗಾಗಿ ತಾಲ್ಲೂಕು ಮಟ್ಟದ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿಗಳಿಂದ ದೃಢೀಕರಿಸಿ ನಿಗಮಕ್ಕೆ ಸಲ್ಲಿಸಬೇಕು.
ಅರ್ಜಿಯನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.