ದಾವಣಗೆರೆ ಮಾ. 03 : ಮಾರ್ಚ್ 09 ರಿಂದ 29 ರವರೆಗೆ ನಡೆಯುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು ಪದವಿ ಪೂರ್ವ ಶಿಕ್ಷಣ ಮಂಡಳಿಯ ಮಾರ್ಗಸೂಚಿಯಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷೆ ನಿಯೋಜಿತ ಅಧಿಕಾರಿಗಳು ಸಮಯ ಪಾಲನೆ ಹಾಗೂ ಶಿಸ್ತಿನಿಂದ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.
ಕಾಲಕಾಲಕ್ಕೆ ಪರೀಕ್ಷಾ ದಿನಗಳಲ್ಲಿ ಸಂಬಂಧಿಸಿದ ಖಜಾನೆಗಳಿಂದ ಪ್ರಶ್ನೆ ಪತ್ರಿಕೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿತರಣೆ ಕುರಿತು ಹೆಚ್ಚಿನ ಜವಾಬ್ದಾರಿ ವಹಿಸಕೊಳ್ಳಬೇಕು. ಖಜಾನೆ ಅಧಿಕಾರಿಗಳು, ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.
ನಿಷೇಧ: ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಕೊಠಡಿ ಮೇಲ್ವೆಚಾರ ಸಿಬ್ಬಂದಿಗಳು ಮೊಬೈಲ್ ಫೋನ್/ಇತರೆ ವಿದ್ಯುನ್ಮಾನ ಆಧುನಿಕ ಉಪಕರಣಗಳ ಬಳಕೆ ನಿಷೇಧಿಸಿದೆ. ಕೊಠಡಿ ಒಳಗೆ ಯಾರು ವಿದ್ಯುನ್ಮಾನ ಉಪಕರಣಗಳನ್ನು ತರಗೆದುಕೊಂಡು ಹೋಗುವಂತಿಲ್ಲ ಹಾಗೂ ಪರೀಕ್ಷಾ ಕೇಂದ್ರ ಆವರಣದಲ್ಲಿ ಅನಾವಶ್ಯಕ ಓಡಾಟ ಪರೀಕ್ಷೆ ಕಾರ್ಯಕ್ಕೆ ಸಂಬಂಧಿಸಿದೆ ಇರುವ ವ್ಯಕ್ತಿಗಳ ಪ್ರವೇಶಕ್ಕೆ ನಿಷೇಧವಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಸೂಚನೆ ನೀಡಿದರು. ಹಾಗೂ ಪರೀಕ್ಷ ಕೇಂದ್ರ ಸುತ್ತಲು ಸೆಕ್ಷನ್ 144 ರನ್ವಯ ನಿಷೇಧಜ್ಞೆ ಘೋಷಿಸಲಾಗುವುದು. ಎಂದರು.
ಯಾವ ವಿಷಯದ ಪರೀಕ್ಷೆ ನಡೆಯುತ್ತಿದೆಯೋ ಆ ದಿನದಂದು ಅದೇ ವಿಷಯಕ್ಕೆ ಸಂಬಂಧಿಸಿದ ಉಪನ್ಯಾಸಕರನ್ನು ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಕಾತಿ ಮಾಡಿಕೊಳ್ಳಬಾರದು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧಿಕ್ಷಕರು, ಪರೀಕ್ಷಾರ್ಥಿಗಳನ್ನು ಪೀಠೋಪಕರಣ ಇನ್ನಿತರ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಾಲೆಗಳಿಂದ ನೆರವು ಪಡೆದುಕೊಳ್ಳಲು ಸೂಚಿಸಿದರು.
ಪರೀಕ್ಷಾ ಕೇಂದ್ರ: ಜಿಲ್ಲೆಯ ದಾವಣಗೆರೆ ತಾಲ್ಲೂಕಿನಲ್ಲಿ 17 , ಹರಿಹರ ತಾಲ್ಲೂಕಿನಲ್ಲಿ 04, ಜಗಳೂರು ತಾಲ್ಲೂಕಿನಲ್ಲಿ 03, ಚನ್ನಗಿರಿ ತಾಲ್ಲೂಕಿನಲ್ಲಿ 04, ಹೊನ್ನಾಳಿ ತಾಲ್ಲೂಕಿನಲ್ಲಿ 03 ಕೇಂದ್ರಗಳು ಒಳಗೊಂಡಂತೆ ಒಟ್ಟಾರೆ 31 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
20445 ವಿದ್ಯಾರ್ಥಿಗಳು ನೊಂದಣಿ 17928 ಹೊಸ ವಿದ್ಯಾರ್ಥಿಗಳು, 2159 ಪುನರಾವರ್ತಿತ ವಿದ್ಯಾರ್ಥಿಗಳು, 358 ಖಾಸಗೀ ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟಾರೆಯಾಗಿ ಜಿಲ್ಲೆಯ 20445 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ನೊಂದಾಯಿಸಿಕೊಂಡಿದ್ದಾರೆ.
ವೀಕ್ಷಕರ ನೇಮಕ: ಪಾರದರ್ಶಕ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಖಜಾನೆಯಿಂದ ಪ್ರಶ್ನೆ ಪತ್ರಿಕೆ ರವಾನಿಸುವ ವಾಹನಗಳಿಗೆ ಜಿಪಿಎಸ್ ಅಲವಡಿಸಲಾಗುವುದು ಕುಡಿಯುವ ನೀರಿನ ವ್ಯವಸ್ಥೆ ಆಯಾಯ ಪರೀಕ್ಷಾ ಕೊಠಡಿ ಒಳಗೆ ವ್ಯವಸ್ಥೆ ಮಾಡುವುದು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಪ್ರವೇಶಪತ್ರ ಹಾಗೂ ಗುರುತಿನ ಚೀಟಿ ಹಾಗೂ ಕಾಲೇಜುಗಳಲ್ಲಿ ನಿಗದಿ ಪಡಿಸಿದ ಸಮವಸ್ತ್ರ ಧರಿಸಿ ಹಾಜರಾಗುವುದು ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಪೀಠೋಪರಕಣ ವ್ಯವಸ್ಥೆ ಮಾಡಲು ಸೂಚಿಸಿದರು
ಸಭೆಯಲ್ಲಿ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಬಸವರಾಜ ಬಸರ್ಗಿ, ಜಿಲ್ಲಾ ಖಜಾನೆ ಉಪನಿರ್ದೇಶಕಿ ಪ್ರಭಾವತಿ, ಡಿ.ಡಿ.ಪಿ.ಐ ತಿಪ್ಪೇಶಪ್ಪ, ಡಿ.ಡಿ.ಪಿ.ಯು ಶಿವರಾಜ್. ಎಂ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತಹಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ವಿóಶೇಷ ಪ್ರಶ್ನೆ ಪತ್ರಿಕೆ ಪಾಲಕರು ಉಪಸ್ಥಿತರಿದ್ದರು.
