ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ  ಮಾರ್ಚ್ 05ರ ಭಾನುವಾರ ಬೆಳಿಗ್ಗೆ 11.30ಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
 ಕೇಂದ್ರ ಸಂಸದೀಯ ವ್ಯವಹಾರ ಗಣಿ ಹಾಗೂ ಕಲ್ಲಿದ್ದಲು ಖಾತೆ ಸಚಿವರಾದ ಪ್ರಹ್ಲಾದ್ ಜೋಶಿ ಸಮ್ಮೇಳ ಉದ್ಯಾಟಿಸಲಿದ್ದಾರೆ. ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಕಾಮಗಾರಿಗಳ ಉದ್ಘಾಟನೆ ನೆರೆವೇರಿಸುವರು. ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಮಾಹಿತಿ ಕಣಜ ಉದ್ಘಾಟಿಸುವರು. ಸಹಕಾರ ಸಚಿವರಾದ ಎಸ್.ಟಿ ಸೋಮಶೇಖರ್ ಸಂಜೀವಿನಿ ಒಕ್ಕೂಟಗಳ ಮಳಿಗೆಗಳನ್ನು ಉದ್ಘಾಟಿಸುವರು. ಸಂಸದರಾದ ಜಿ.ಎಂ ಸಿದ್ದೇಶ್ವರ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡುವರು.
  ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು.
 ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ,  ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ ಭಾಗವಹಿಸಲಿದ್ದಾರೆ.
   ಮುಖ್ಯ ಅತಿಥಿಗಳಾಗಿ ವಿಧಾನಸಭಾ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ರಾಮಪ್ಪ, ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಆರ್.ಶಂಕರ್, ಚಿದಾನಂದ.ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್ ನಾಯ್ಕ,  ಮಹಾನಗರ ಪಾಲಿಕೆ ಮಹಾಪೌರರಾದ ವಿನಾಯಕ್ ಟಿ.ಹೆಚ್ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಪ್ರಕಾಶ್ ಎ.ವೈ ಭಾಗವಹಿಸುವರು.

Leave a Reply

Your email address will not be published. Required fields are marked *