ವಾಹನ ಸವಾರರ ಸಂಚಾರಿ ದಂಡ ಪಾವತಿಸಲು ರಾಜ್ಯ ಸರ್ಕಾರ ಶೇ.50ರಷ್ಟು ರಿಯಾಯಿತಿಯನ್ನು ಮಾ. 04 ರಿಂದ ಅನ್ವಯವಾಗುವಂತೆ 15 ದಿನಗಳ ವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೋಲಿಸ್ ಠಾಣೆಯನ್ನು ಸಂಪರ್ಕಿಸಬಹುದು ಹಾಗೂ ವಾಹನ ಸವಾರರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===