ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ-2023 ರ ಅಂಗವಾಗಿ ಮಾರ್ಚ್ 8 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಉದ್ಘಾಟಿಸುವರು. ಜಿಲ್ಲಾಧಿಕಾರಿಗಳಾದ ಶಿವಾನಂದ ಕಾಪಶಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎ. ಚನ್ನಪ್ಪ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನಿವೇದಿತಾ, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸನಗೌಡ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.