ಹೊನ್ನಾಳಿ : ಮಾರ್ಚ 17 ರಂದು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ 1800 ಕೋಟಿ ರೂಪಾಯಿಗೂ ಅಧಿಕ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ ಹೊನ್ನಾಳಿ ಉಪವಿಭಾಗಾಧಿಕಾರಿ ಹುಲುಮನಿ ತಿಮ್ಮಣ್ಣ ತಿಳಿಸಿದರು.
ಭಾನುವಾರ ನಗರದ ತಾ.ಪಂ.ಸಾಮಥ್ರ್ಯ ಸೌಧದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.
ಹೊನ್ನಾಳಿ ನಗರದ ಖಾಸಗೀ ಬಸ್ ನಿಲ್ದಾಣದ ಎದುರುಗಿರುವ ಖಾಸಗೀ ಲೇಹೌಟ್‍ನಲ್ಲಿ ಮಾರ್ಚ 17 ರಂದು ಕಾರ್ಯಕ್ರಮ ನಡೆಯಲಿದ್ದು, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಸೇರಿದಂತೆ ಹತ್ತಕ್ಕೂ ಹೆಚ್ಚು ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
1800 ಕೋಟಿ ರೂಪಾಯಿ ವೆಚ್ಚದಲ್ಲಿ 975 ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡಲಿದ್ದು ಆಯಾ ಇಲಾಖೆಯ ಅಧಿಕಾರಿಗಳು ನಿಲಾನಾಸ್ಯಗಳನ್ನು ಸಿದ್ದ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳುವುದರ ಜೊತೆಗೆ ಆಯಾ ಇಲಾಖೆಗಳ ಅರ್ಯ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರ ಬೇಕೆಂದ ಅವರು, ಕಾರ್ಯಕ್ರಮದಲ್ಲಿ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಯನ್ನು ತರುವಂತೆ ಸೂಚಿಸಿದರು.
ಇಓ ರಾಮಬೋವಿ ಮಾತನಾಡಿ, ಪಿಡಿಓಗಳು ತಮ್ಮ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಸಮಗ್ರ ಮಾಹಿತಿಯ ಜೊತೆಗೆ, ಅರ್ಹ ಫಲಾನುಭವಿಗಳು ಹಾಗೂ 2116 ಮನೆಗಳ ಫಲಾನುಭವಿಗಳನ್ನು ಕರೆ ತರುವಂತೆ ಸೂಚಿಸಿದರು.
ಈ ಸಂದರ್ಭ ತಹಶೀಲ್ದಾರ್ ತಿರುಪತಿ, ಸಮಾಜ ಕಲ್ಯಾಣ ಇಲಾಖೆ ಉಮಾ ತಿಮ್ಮನಗೌಡ, ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮೃತ್ಯುಂಜಯ್ಯ, ತುಂಗ ಮೇಲ್ದಡೆ ಯೋಜನೆ ಅಧಿಕಾರಿ ಮಂಜುನಾಥ್, ಬೆಸ್ಕಾಂ ಅಧಿಕಾರಿಗಳು ಶ್ರೀನಿವಾಸ್ ನಾಯ್ಕ, ಪುರಸಭೆ ಮುಖ್ಯಾಧಿಕಾರಿ ವೀರಭದ್ರಯ್ಯ ಸೇರಿದಂತೆ ಮತ್ತೀತರರಿದ್ದರು.

Leave a Reply

Your email address will not be published. Required fields are marked *