ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 10 ತಿಂಗಳುಗಳ ಅವಧಿಗೆ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ಮೇ.5 ರಿಂದ ಆರಂಭವಾಗಲಿದ್ದು, ಅರ್ಜಿ ನಮೂನೆಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಕಚೇರಿಯಲ್ಲಿ ಹಾಗೂ hಣಣಠಿs://hoಡಿಣiಛಿuಟಣuಡಿeಜiಡಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಮಾರ್ಚ್ 11ರಿಂದ ಏಪ್ರಿಲ್ 12 ರ ವರೆಗೆ ಲಭ್ಯವಿದ್ದು, ಡೌನ್ ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ಶುಲ್ಕದೊಂದಿಗೆ   ತೋಟಗಾರಿಕೆ ಉಪನಿರ್ದೇಶಕರು ಜಿಲ್ಲಾ ಪಂಚಾಯಿತಿ ಅಥವಾ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಯ ದೂ.ಸಂ: 08192-230049 ಸಂಸರ್ಕಿಸಬಹುದು ಎಂದು ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===

Leave a Reply

Your email address will not be published. Required fields are marked *