ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ ಇವರು ಮಾರ್ಚ್-2023ರ ಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ.
ಮಾರ್ಚ್ 17 ರಂದು ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿ ಪಟ್ಟಣದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ದತೆಗಳನ್ನು ಪರಿಶೀಲಿಸುವುದು ಮತ್ತು ಸಾರ್ವಜನಿಕರ ಕುಂದುಕೊರತೆಗಳನ್ನು ಆಹ್ವಾಲುಗಳನ್ನು ಸ್ವೀಕರಿಸುವರು. ಮಧ್ಯಾಹ್ನ 01 ಗಂಟೆಗೆ ಹೊನ್ನಾಳಿಯ ಖಾಸಗಿ ಬಸ್ ನಿಲ್ದಾಣ ಹತ್ತಿರವಿರುವ ಪಟ್ಟಣ ಶೆಟ್ಟಿ ಲೇಔಟ್ ನಲ್ಲಿ ಮಾನ್ಯಮುಖ್ಯಮಂತ್ರಿಗಳು ಹಾಗೂ ಸಂಪುಟ ದರ್ಜೆಯ ಸಚಿವರು ಉದ್ಘಾಟಿಸಲಿರುವ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಾರ್ಚ್ 18 ಮತ್ತು 19 ರಂದು ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು ನಂತರ ಹೊನ್ನಾಳಿಗೆ ಪ್ರಯಾಣ ಬೆಳೆಸುವರೆಂದು ಪ್ರಕಟಣೆ ತಿಳಿಸಿದೆ.