ಜಿಲ್ಲೆಯಲ್ಲಿ ಸ್ಮಶಾನ ಭೂಮಿ ಇಲ್ಲದಿರುವ ಗ್ರಾಮಗಳು ಸ್ಮಶಾನ ಭೂಮಿ ಒದಗಿಸುವ ಸಂಬಂಧ ಹಾಗೂ ಸ್ಮಶಾನ ಭೂಮಿಗಳು ಒತ್ತುವರಿಯಾಗಿದ್ದಲ್ಲಿ ಒತ್ತುವರಿಗಳ ಕುರಿತು ಸಂಬಂಧಿಸಿದ ಸ್ಥಳೀಯ ತಹಶೀಲ್ದಾರರಿಗೆ ಮನವಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮನವಿ ಮಾಡಿಕೊಂಡಿದ್ದಾರೆ.
ಅದರಂತೆ ಸರ್ಕಾರದ ಕಾರ್ಯದರ್ಶಿಗಳು ಕಂದಾಯ ಇಲಾಖೆ ಬೆಂಗಳೂರು ಇವರು ಈಗಾಗಲೇ ನೀಡಿರುವ ಸ್ಮಶಾನಗಳಲ್ಲಿ ಒತ್ತುವರಿಯಾಗಿದ್ದಲ್ಲಿ ಕೂಡಲೇ ತೆರವುಗೊಳಿಸಲು ಹಾಗೂ ಸ್ಮಶಾನ ಭೂ ಮಿ ಲಭ್ಯವಿಲ್ಲದ ಗ್ರಾಮಗಳಿಗೆ ಸ್ಮಶಾನಗಳನ್ನು ಒದಗಿಸಲು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲು ಸೂಕ್ತ ಕ್ರಮವಹಿಸುವಂತೆ ಸೂಚಿಸಲಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮನವಿ ಸಲ್ಲಿಸಲು ತಿಳಿಸಿದ್ದಾರೆ.

Leave a Reply

Your email address will not be published. Required fields are marked *