ಹೊನ್ನಾಳಿ ಪಟ್ಟಣದಲ್ಲಿರುವ ಜನತಾ ಶಿಕ್ಷಣ ಉರ್ದು ಪ್ರೌಢಶಾಲೆ ವತಿಯಿಂದ ಶಾಲೆಯ ಆವರಣದಲ್ಲಿ 2022/ 23 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕೆಎ???ರ್ ಟಿಸಿ ಡಿಪೆÇೀ ಮ್ಯಾನೇಜರ್ ಮಹೇಶ್ವರಪ್ಪ ಗಿಡಕ್ಕೆ ನೀರುಉಣಿಸುವುದರ ಮೂಲಕ ಚಾಲನೆ ನೀಡಿ ನಂತರ ಮಾತನಾಡಿದ ಅವರು ಈ ಉರ್ದು ಶಾಲೆಯಲ್ಲಿ ನುರಿತ ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣವನ್ನು ನೀಡುತ್ತಿದ್ದು ಶಿಕ್ಷಕರ ಬೋಧನೆಯಿಂದ 2022ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿಅತಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳು ಈ ಶಾಲೆಗೆ ಹೆಸರು ತಂದು ಕೊಟ್ಟಿದ್ದಾರೆ. ಅದೇ ರೀತಿ 2223ನೇ ಸಾಲಿನ ಪರೀಕ್ಷೆಯಲ್ಲಿ ಬರೆಯುವಂತ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದು ಶಾಲೆಗೆ ಹೆಸರು ತರಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶಕೀಲ್ ಅಹ್ಮದ್ ಪ್ರಾಸ್ತಾವಿಕ ನುಡಿಯನ್ನು ನಡೆಸಿಕೊಟ್ಟು ನಂತರ ಮಾತನಾಡಿ, ನಮ್ಮ ಶಾಲೆಯಲ್ಲಿ ನುರಿತ ಶಿಕ್ಷಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ನಮ್ಮ ಶಾಲೆಗೆ ನಾಲ್ಕು ನಕ್ಷತ್ರಗಳು ಎಂಬ ಬಿಂಬಿತರಾಗಿರುವ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದು ನಮ್ಮ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ವಿದ್ಯಾರ್ಥಿಗಳ ಕುರಿತು ಮಾತನಾಡಿದರು.
ಅಧ್ಯಕ್ಷೀಯ ಭಾಷಣವನ್ನು ಅಲ್ದಾಜ ಎಚ್ ಕಡೆಮನಿ ವಕೀಲರು ವಿದ್ಯಾರ್ಥಿಗಳ ಕುರಿತು ಮಾತನಾಡಿದರು.
2021/ 22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪರಿವೀಕ್ಷಕರಾದ ಶ್ರೀಮತಿ ಶೈಲಜಾ ಬಾಬು ರವರ ಅನುಪಸ್ಥಿತಿಯಲ್ಲಿ ಬಹುಮಾನವನ್ನು ವಿತರಣೆ ಮಾಡಲಾಯಿತು. ಇದರ ಜೊತೆಗೆ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿಗಳೊಂದಿಗೆ ಹಾಗೂ ಅಸ್ಪೃಶ್ಯತೆ ನಿವಾರಣೆ ಬಗ್ಗೆ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ರಿಹಾನ್ ಗಜಲ್ ಆಡುಗಾರಿಕೆಯಿಂದ ತಾಲೂಕು ಮಟ್ಟ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಎಂದು ಆ ವಿದ್ಯಾರ್ಥಿಗೆ ಸನ್ಮಾನಿಸಲಾಯಿತು.
ಪ್ರಾರ್ಥನೆಯನ್ನು ಕುಮಾರಿ ಬಿಬಿ ಆಯುಷಾ 9ನೇ ತರಗತಿಯ ವಿದ್ಯಾರ್ಥಿನಿ ನಡೆಸಿಕೊಟ್ಟರು.
ಸ್ವಾಗತವನ್ನು ಶ್ರೀಮತಿ ಸಂಶಾದ್ ಬೇಗಂ ಸಹ ಶಿಕ್ಷಕಿ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಹಮ್ಮದ್ ಗೌಸ್ ಲೋಹಾರ್, ಸಂಸ್ಥೆ ಉಪಾಧ್ಯಕ್ಷರಾದ ಮೊಹಮ್ಮದ್ ರಫಿ. ಹೊನ್ನೂರು ಸಾಬ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಗಮದ ಜಗದೀಶ್ ಅಬ್ದುಲ್ ಲತೀಪ ಶಾಲಾ ಶಿಕ್ಷಕರು ಮತ್ತು ಶಿಕ್ಷಕಿಯರು ವಿದ್ಯಾರ್ಥಿಗಳು ಸಹ ಉಪಸ್ಥಿತಿಯಲ್ಲಿದ್ದರು.