ನ್ಯಾಮತಿ : ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ. ರೇಣುಕಾಚಾರ್ಯ ಅವರಿಂದು ನ್ಯಾಮತಿ ಪಟ್ಟಣದಲ್ಲಿ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.
ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ,ಅರಳಿಕಟ್ಟೆ ವೃತ್ತ, ಹಾಗೂ ಬಸ್‍ಸ್ಟ್ಯಾಂಡ್ ಬಳಿ ಮತಯಾಚನೆ ನಡೆಸಿ, ಏಪ್ರಿಲ್ 20 ನಾಮಪತ್ರ ಸಲ್ಲಿಸುತ್ತಿದ್ದು, ಮುಖಂಡರು, ಮತದಾರ ಬಂದುಗಳು ಹೆಚ್ಚಿ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಇದ್ದ ನ್ಯಾಮತಿಯನ್ನು ಪಟ್ಟಣ ಪಂಚಾಯಿಯನ್ನಾಗಿ ಮೇಲ್ದರ್ಜೆಗೇರಿಸಿದ್ದು, 10 ಹಾಸಿಗೆ ಇದ್ದ ನ್ಯಾಮತಿ ಆಸ್ಪತ್ರೆಯನ್ನು 30 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆ ಗೇರಿಸಿದ್ದು, ನ್ಯಾಮತಿ ಪಟ್ಟಣವನ್ನು ಸಾಕಷ್ಟು ಅಭಿವೃದ್ದಿ ಮಾಡಲಾಗಿದೆ ಎಂದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಯಾದ 116 ಕೆರೆಗಳನ್ನು ತುಂಬಿಸುವ 518 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ಸದ್ಯದಲ್ಲೇ ಕೆರೆಗಳಿಗೆ ನೀರು ಹರಿಯಲಿದೆ ಎಂದರು.
ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಕೆಲಸ ಮಾಡಿದ್ದು, ಕೋವಿಡ್ ಸಂದರ್ಭದಲ್ಲಿ ನನ್ನ ಜೊತೆ ಗಟ್ಟಿಯಾಗಿ ನಿಂತಿದ್ದು ನ್ಯಾಮತಿ ಪಟ್ಟಣ ಇದನ್ನು ನಾನು ಎಂದು ಮರೆಯಲು ಸಾಧ್ಯವಿಲ್ಲಾ ಎಂದ ಶಾಸಕರು, ಈ ಭಾಗದಲ್ಲಿ ಕಳೆದ ಬಾರೀಗಿಂತ ಹೆಚ್ಚು ಮತ ನೀಡುವಂತೆ ಮನವಿ ಮಾಡಿದರು. ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದು,ಕೆಲಸ ಮಾಡಿದವರಿಗೆ ಓಟು ನೀಡಿ ಎಂದರು.
ಪಟ್ಟಣದ ನೀರಿನ ಸಮಸ್ಯೆ, ರಸ್ತೆಗಳ ಅಭಿವೃದ್ದಿ, ಶಾಲಾ ಕಾಲೇಜುಗಳಿಗೆ ಕಟ್ಟಡ ನಿರ್ಮಾಣ ಸೇರಿದಂತೆ ನೂರಾರು ಕೋಟಿ ಅನುದಾನದಲ್ಲಿ ಕಾಮಗಾರಿ ನಡೆಯುತ್ತಿವೇ ಎಂದು ತಮ್ಮ ಅವಧಿಯಲ್ಲಿ ಮಾಡಿದ ಕೆಲಸಗಳನ್ನು ಸ್ಮರಿಸಿಕೊಂಡರು.