ನ್ಯಾಮತಿ ಪಟ್ಟಣದಲ್ಲಿಂದು ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಡೆಯುವ ಸಂದರ್ಭದಲ್ಲಿ ಸ್ವೀಪ್ ಜಾಗೃತಿ ಕಾರ್ಯಕ್ರಮದ ಯೋಜನೆಯ ಅಡಿಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶರಾವ್ ನೇತೃತ್ವದಲ್ಲಿ ಸಾರ್ವಜನಿಕರಿಗೆ ಮೇ 10ರಂದು ಕಡ್ಡಾಯವಾಗಿ ಮತದಾನ ಮಾಡುವಂತೆ ಸ್ಥಳದಲ್ಲಿ ಇದ್ದ ಕಲಾತಂಡದೊಂದಿಗೆ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳ ಗಣೇಶ್ ರಾವ್ ಪಿ ಪಂಚಾಯಿತಿ ಸಿಬ್ಬಂದಿಗಳಾದ ಕಂದಾಯ ನಿರೀಕ್ಷಕ ಹಿಮಾಯತ್ ಮಂಜು ಹನುಮಂತಪ್ಪ ಪ್ರಶಾಂತ್ ಇನ್ನು ಮುಂತಾದವರು ಭಾಗವಹಿಸಿದ್ದರು.