ನ್ಯಾಮತಿ ಪಟ್ಟಣದಲ್ಲಿ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ರ ಮೇ 10ರಂದು ನಡೆಯುವ ಚುನಾವಣೆಯ ಅಂಗವಾಗಿ ಮತಗಟ್ಟೆಯ ಜಾಗೃತಿ ಮೂಡಿಸಲು “ನಮ್ಮ ನಡೆ ಮತಗಟ್ಟೆಯ ಕಡೆ ” ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ರಾಜ್ಯಾದ್ಯಂತ ಏಕ ಕಾಲದಲ್ಲಿ ನಡೆಸಲು ಚುನಾವಣಾ ಆಯೋಗ ಸೂಚಿಸಿರುವಂತೆ ನ್ಯಾಮತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಮತಗಟ್ಟೆಗಳಲ್ಲಿ “ನಮ್ಮ ನಡೆ ಮತಗಟ್ಟೆಯ ಕಡೆ ” ಕಾರ್ಯಕ್ರಮವನ್ನು ಬೆಳಗ್ಗೆ 8:00 ಗಂಟೆಗೆ ಸರಿಯಾಗಿ ಪ್ರತಿ ಮತಗಟ್ಟೆಗಳಲ್ಲಿ ಚುನಾವಣಾ ಆಯೋಗ ನಿರ್ದೇಶನದಂತೆ ಮತಗಟ್ಟೆ ದ್ವಜವನ್ನು ಸ್ಥಾಪಿಸುವ ಮಾಹಿತಿ ಆಧಾರಿತ ಕರಪತ್ರಗಳನ್ನು ಸಾರ್ವಜನಿಕರಿಗೆ ನೀಡುವುದರ ಮೂಲಕ ಬೈಕ್ ಜಾತದೊಂದಿಗೆ ಪ್ರತಿಯೊಂದು ಕೇರಿಯಲ್ಲಿ ಹೋಗಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕ್ ನಿರ್ವಹಣಾಧಿಕಾರಿ ರಾಮಭೂಮಿ ಪಂಚಾಯಿತಿ ಮುಖ್ಯ ಅಧಿಕಾರಿಗಳ ಗಣೇಶ್ ರಾವ್ ತಾಲೂಕ್ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗದವರು ಸಹ ಉಪಸ್ಥಿತಿಯಲ್ಲಿದ್ದರು.