ನ್ಯಾಮತಿ :ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮೂವರು ಬಿಜೆಪಿ ಕಾರ್ಯಕರ್ತರು ಸೇರಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಸುಮಾರು8.30 ಕ್ಕೆ ಸಮಯಕ್ಕೆ ಬಿಜೆಪಿ ಕಾರ್ಯಕರ್ತರಾದ ಡಿ ಬಿ ಪ್ರವೀಣ’ ಪ್ರಕಾಶ್: ತೀರ್ಥಲಿಂಗ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತ ಮಧು ಎಂಬ ವ್ಯಕ್ತಿಯ ಮೇಲೆ ಏಕಾಏಕಿ ಬಂದು ಬ್ಲೇಡಿನಿಂದ ಬಲಗೈಗೆ ಎರಡು ಕಡೆ ಗಲ್ಲಕ್ಕೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಊರಿನ ಗ್ರಾಮಸ್ಥರು ಸೇರಿ ಹಲ್ಲಿಗೆ ಒಳಗಾದ ಮಧು ಎಂಬ ವ್ಯಕ್ತಿಯನ್ನು ನ್ಯಾಮತಿ ಆಸ್ಪತ್ರೆಗೆ ದಾಖಲಿಸಿದ್ದರು.
ಈ ವಿಷಯವನ್ನು ಕೇಳಿದ ಹಾಲಿ ಶಾಸಕರಾದ ಡಿ ಜಿ ಶಾಂತನಗೌಡ್ರರವರ ಸೊಸೆಯರಾದ ಶ್ರೀಮತಿ ಸೌಮ್ಯ ಪ್ರದೀಪ್ ಶ್ರೀಮತಿ ವಾಣಿ ಸುರೇಂದ್ರರವರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲಿಗೆ ಒಳಗಾದ ಕಾಂಗ್ರೆಸ್ ಕಾರ್ಯಕರ್ತ ಮಧುರವರನ್ನ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರು . ನಂತರ ನ್ಯಾಮತಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಹಲ್ಲೆ ಮಾಡಿದ ಬಿಜೆಪಿ ಮೂರು ಜನ ಕಾರ್ಯಕರ್ತರನ್ನ ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಇನ್ಸ್ಪೆಕ್ಟರ್ ರಾಘವೇಂದ್ರ ಕಾಂಡಿಕಿರವರಿಗೆ ಒತ್ತಾಯಿಸಿದರು. ನ್ಯಾಮತಿ ಪೊಲೀಸ್ ಇಲಾಖೆಯು ಅಧಿಕಾರಿಗಳು ಅಪರಾಧಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಸರ್ಕಾರಿ ಮೆಗನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ತಿಳಿಸಿದ್ದಾರೆ.