ನ್ಯಾಮತಿ : ನ್ಯಾಮತಿ ತಾಲೂಕಿನ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಫಲವನಹಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೇ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಚೀಲೂರು ಗ್ರಾಮದ ಬಳಿ ತುಂಗಭದ್ರಾ ನದಿಯ ದಡದಲ್ಲಿ ನಿರ್ಮಾಣವಾಗುತ್ತಿರುವ ಜಾಕ್‍ವೆಲ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಅವರು ಮಾತನಾಡಿದರು.
ಫಲವನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 83 ಕೋಟಿ ರೂಪಾಯಿ ವೆಚ್ಚದಲ್ಲಿ 59 ಹಳ್ಳಿಗಳಿಗೆ ಶುದ್ದ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದೆ ಎಂದರು.
ಜೋಗ, ಚಿನ್ನಿಕಟ್ಟೆ, ಜಯನಗರ, ಸವಳಂಗ ಸೇರಿದಂತೆ 59 ಹಳ್ಳಿಗಳಿಗೆ ಈ ಯೋಜನೆಯಿಂದ ಶುದ್ದ ಕುಡಿಯುವ ನೀರು ಪೂರೈಕೆ ಯಾಗಲಿವೆ ಎಂದರು.
ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೇ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳ್ಳಲಿಂದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ ರೇಣುಕಾಚಾರ್ಯ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆಂದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಕೆರೆ ತುಂಬಿಸುವ ಯೋಜನೆ ಸೇರಿದಂತೆ, ಶಾಲಾ,ಕಾಲೇಜು ಕಟ್ಟಡಗಳು, ಸಿಸಿ ರಸ್ತೆಗಳು, ಹೊನ್ನಾಳಿ ನಗರಕ್ಕೆ ಶುದ್ದಕುಡಿಯುವ ನೀರು, ಯುಜಿಡಿ ಸೇರಿದಂತೆ 1500 ಕೋಟಿಗೂ ಹೆಚ್ಚು ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ನಾನು ಜನಾದೇಶಕ್ಕೆ ತಲೆ ಬಾಗುತ್ತೇನೆಂದ ರೇಣುಕಾಚಾರ್ಯ ಆಗಂತ ಮನೆಯಲ್ಲಿ ಕೂರುವುದಿಲ್ಲಾ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಸಂಚಾರ ಮಾಡಿ ಜನ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇನೆಂದರು.
ಈ ಸಂದರ್ಭ ಬೋವಿ ನಿಗಮದ ನಿದೇರ್ಶಕ ಅಜಯ್, ಮುಖಂಡರಾದ ಕರಿಬಸಪ್ಪ,ನಾಗಣ್ಣ, ಸಂತೋಷ್ ಸೇರಿದಂತೆ ಮತ್ತೀತತರಿದ್ದರು.