ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ.
ಆಸಕ್ತರು ಮೇ.30 ರೊಳಗಾಗಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 ಸಂಪರ್ಕಿಸಲು ಕೋರಲಾಗಿದೆ.