ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿಯು ಜುಲೈ ಮಾಹೆಯಿಂದ ಆರಂಭಿಸುತ್ತಿರುವ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾಗಿ ಹಾಗೂ ಕಲಬುರಗಿ ಸ್ಥಳಗಳಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸಲಾಗುವುದು.
ತರಬೇತಿಗೆ ಸಹಕಾರ ಸಂಘ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತರಬೇತಿ ಹೊಂದದೇ ಇರುವ ಸಿಬ್ಬಂದಿಗಳು ಮತ್ತು ಖಾಸಗಿ ಅಭ್ಯರ್ಥಿUಳು ಜೂನ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಸಹಕಾರ ಒಕ್ಕೂಟ ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *