ಮೇ 31 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕು. ಕ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ವಕೀಲರ ಸಂಘ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ ಇವರ ಸಂಯುಕ್ತಾಶ್ರಾಯದಲ್ಲಿ ಆಯೋಜಿಸಲಾಗಿದೆ.
 ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್.ಹೆಗಡೆ ಉದ್ಘಾಟಿಸುವರು.  ಜಿಲ್ಲಾ ಆರೋಗ್ಯ ಮತ್ತು ಕು. ಕ ಅಧಿಕಾರಿಗಳಾದ ಡಾ. ನಾಗರಾಜ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಹಾಗೂ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಸುಭಾಶ್‍ಚಂದ್ರ .ಎಸ್,  ಕರುಣಾ ಜೀವ ಕಲ್ಯಾಣ ಟ್ರಸ್ಟ್‍ನ ನಿರ್ದೇಶಕ ಬಸವಲಿಂಗಪ್ಪ ಶಿವನಕೆರೆ ಹಾಗೂ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಭಾಗವಹಿಸುವರು

Leave a Reply

Your email address will not be published. Required fields are marked *