ನ್ಯಾಮತಿ: ತಾಲೂಕು ಸೋಗಿಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು 2023 -24ನೇ ಸಾಲಿನ ಶೈಕ್ಷಣಿಕ ವರ್ಷದ ವಿನೂತನ ಶಾಲಾ ಪ್ರಾರಂಭೋತ್ಸವಕ್ಕೆ ತಳಿರು ತೋರಣಗಳಿಂದ ಸಿಂಗರಿಸಿದ ಶಾಲೆಯನ್ನ ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜ್ ರವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜರವರು ಚಾಲನೆ ನೀಡಿ ನಂತರ ಮಾತನಾಡಿದ ಅವರು ಸೋಗಿಲು ಗ್ರಾಮಸ್ಥರು ಈ ಶಾಲೆಯ ಎಲ್ಲಾ ಶಿಕ್ಷಕರು ನನ್ನನ್ನು ಮತ್ತು ವಿದ್ಯಾರ್ಥಿಗಳನ್ನು ಎತ್ತಿನಗಾಡಿಯಲ್ಲಿ ಊರಿನ ವೀರಭದ್ರೇಶ್ವರ ದೇವಸ್ಥಾನ ಸರ್ಕಲ್ ನಿಂದ ಶಾಲೆಯವರೆಗೆ ಮೆರವಣಿಗೆ ಮೂಲಕ ಬರಮಾಡಿಕೊಂಡಿದ್ದು ವೈಶಿಷ್ಟ ಮತ್ತು ವಿನೂತನ ಕಾರ್ಯಕ್ರಮ ನಡೆಸಿದ್ದು ಬಹಳ ಸಂತೋಷವಾಯಿತು ಎಂದು ಹೇಳಿದರು. ಈ ಕಾರ್ಯಕ್ರಮ ಆಯೋಜನೆ ಮಾಡಿದ ಎಲ್ಲ ಶಿಕ್ಷಕವೃಂದದವರಿಗೂ ಧನ್ಯವಾದಗಳು ತಿಳಿಸಿ ತದನಂತರ ಶಾಲೆಗೆ ಬಂದಂತ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಸಮವಸ್ತ್ರ ವಿತರಿಸಿದರು. ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರುದ್ರಪ್ಪ ಕೆ ಆರ್ ಶಾಲೆಗೆ ಭೇಟಿ ನೀಡಿ ಮಧ್ಯಾಹ್ನದ ಉಪಹಾರದ ಯೋಜನೆ ಕಾರ್ಯಕ್ರಮಕ್ಕೆ ಸಂಬಂಧಿಸಿದ ಅಡುಗೆ ಮತ್ತು ಸ್ವಚ್ಛತೆ ನೀರು ಸಂಗ್ರಹಣೆ ನಡೆಸಿರುವ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬಿ ಆರ್ ಸಿ ತಿಪ್ಪೇಶಪ್ಪ , ದೈಹಿಕ ಶಿಕ್ಷಣಾಧಿಕಾರಿ ಈಶ್ವರಪ್ಪ ಮುಖ್ಯೋಪಾಧ್ಯಾಯ ಬಿ ಕೆ ಪರಮೇಶ್ವರಪ್ಪ ಮತ್ತು ಎಲ್ಲಾ ಶಾಲಾ ಶಿಕ್ಷಕರು ಹಾಗೂ ಊರಿನ ಗ್ರಾಮಸ್ಥರು ವಿದ್ಯಾರ್ಥಿಗಳು ಸಹ ಉಪಸ್ಥಿತಿಯಲ್ಲಿದ್ದರು.