ದಾವಣಗೆರೆ, ಜೂನ್.02 ಜೂನ್ 5 ರಂದು ಬಾಪೂಜಿ ಇಂಜನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿರುವ ಎಸ್.ಎಸ್.ಎಂ ಸಾಂಸ್ಕøತಿಕ ಕೇಂದ್ರದಲ್ಲಿ ಬೆಳಿಗ್ಗೆ 10 ಗಂಟೆಗೆ ವಿಶ್ವ ಪರಿಸರ-2023ರ ದಿನಾಚರಣೆಯನ್ನು ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ದಿ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್, ಪ್ರಾದೇಶಿಕ ಕೇಂದ್ರ ಹಾಗೂ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಉದ್ಘಾಟಿಸುವರು. ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಡಿಎಲ್‍ಎಸ್‍ಎ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ ಕರಣ್ಣವರ ಅಧ್ಯಕ್ಷತೆ ವಹಿಸುವರು. ಬಿಐಇಟಿ ಪ್ರಾಂಶುಪಾಲರಾದ ಡಾ.ಹೆಚ್.ಬಿ ಅರವಿಂದ ವಿಷಯ ತಜ್ಞ ಭಾಷಣ ಮಾಡುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ ಇಟ್ನಾಳ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್.ಕೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್ ಅರುಣ್ ಕುಮಾರ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ರಮೇಶ.ಡಿ.ನಾಯಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ.ಆರ್ ತಿಪ್ಪೇಶಪ್ಪ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಡಾ.ಹೆಚ್ ಲಕ್ಷ್ಮೀಕಾಂತ್, ಬಿಐಇಟಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾದೇಶಿಕ ಕೇಂದ್ರದ ಗೌರವಾನ್ವಿತ ಕಾರ್ಯದರ್ಶಿ ಡಾ.ಎಸ್.ಸುರೇಶ, ಬಿಐಇಟಿಯ ನಿರ್ದೇಶಕರಾದ ಪ್ರೋ.ವೃಷಬೇಂದ್ರಪ್ಪ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.