ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರಕ್ತಭಂಡಾರ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲೆಯ ವಿವಿಧ ರಕ್ತದಾನ ಕೇಂದ್ರಗಳು, ಜಿಲ್ಲಾ ಆರ್.ಆರ್.ಸಿ. ಕಾಲೇಜುಗಳು, ಹಾಗೂ ವಿವಿಧ ಸ್ವಯಂ ಸೇವಾ ಸಂಘ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಿ.ಜಿ ಆಸ್ಪತ್ರೆ ಮುಂಭಾಗ ಜೂನ್ 14 ರಂದು ಬೆಳಗ್ಗೆ 10.30 ಕ್ಕೆ “ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಬೆಳಗ್ಗೆ 09 ಗಂಟೆಗೆ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡುವರು ಹಾಗೂ 10.30 ಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ ಬಿ.ಇಟ್ನಾಳ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ಸುಭಾμï ಚಂದ್ರ ಎಸ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಅಧೀಕ್ಷಕ ಡಾ. ಮಧು ಎಸ್.ಪಿ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಮಂಜುನಾಥ ಪಾಟೀಲ್, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಕೆ ಹೆಚ್. ಗಂಗಾಧರ, ಸಿ.ಜೆ.ಆಸ್ಪತ್ರೆ ಎ.ಆರ್.ಟಿ. ಪ್ಲಸ್ ನೋಡಲ್ ಅಧಿಕಾರಿ ಡಾ. ಕೆ.ಶಿವರಾಜ್, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ರಕ್ತ ಭಂಡಾರದ ವೈದ್ಯಾಧಿಕಾರಿ ಡಾ. ಡಿ.ಹೆಚ್. ಗೀತಾ ಹಾಗೂ ಎಲ್ಲಾ ಕಾರ್ಯಕ್ರಮ ಅನುμÁ್ಠನಾಧಿಕಾರಿಗಳು, ಜಿಲ್ಲಾ ಆ.ಕು.ಕ, ಇಲಾಖೆ ಮತ್ತು ತಾಲ್ಲೂಕು ವೈದ್ಯಾಧಿಕಾರಿಗಳು ಭಾಗವಹಿಸುವರು.