ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಆಯುಷ್ ಇಲಾಖೆ, ದಾವಣಗೆರೆ ಇವರ ಸಹಯೋಗದಲ್ಲಿ ಜೂನ್ 21 ರಂದು ಬೆಳಿಗ್ಗೆ 6.30 ಗಂಟೆಗೆ ನಗರದ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಎನ್.ಹೆಗಡೆ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್. ಅರುಣ್ ಕುಮಾರ್‍ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ. ಬಸವರಾಜು ಮತ್ತು ಕಾರ್ಯದರ್ಶಿ ಎಸ್.ಬಸವರಾಜು, ಹಾಗೂ ಸಹಕಾರ್ಯದರ್ಶಿ ಎ.ಎಸ್. ಮಂಜುನಾಥ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಯೋಗ ಮತ್ತು ಚಿಕಿತ್ಸೆ ಹಿರಿಯ ವೈದ್ಯಾದಿಕಾರಿ ಡಾ|| ಮಂದಾಕಿನಿ, ವಕೀಲರು ಮತ್ತು ಅಂತರಾಷ್ಟ್ರೀಯ ಯೋಗ ಪ್ರಶಸ್ತಿ ವಿಜೇತರಾದ ಮಂಜುನಾಥ ಭಾಗವಹಿಸುವರು.

Leave a Reply

Your email address will not be published. Required fields are marked *