ದಾವಣಗೆರೆ ವಿಶ್ವವಿದ್ಯಾನಿಲಯದ ಪರಿಸರ ಅಧ್ಯಯನ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಜೂನ್ 23 ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಎಂ.ಬಿ.ಎ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪದ್ಮಶ್ರೀ ಪುರಸ್ಕøತ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸುವರು. ಕುಲಸಚಿವೆ ಸರೋಜ ಬಿ.ಬಿ., ಪರೀಕ್ಷಾಂಗ ಕುಲಸಚಿವ ಡಾ.ಕೆ. ಶಿವಶಂಕರ, ಹಣಕಾಸು ಅಧಿಕಾರಿ ಡಿ.ಪ್ರಿಯಾಂಕ, ಪರಿಸರ ಅಧ್ಯಯನ ವಿಭಾಗದ ಸಂಯೋಜನಾಧಿಕಾರಿ ಪೆÇ್ರ.ಎಂ.ಗೋವಿಂದಪ್ಪ, ಎನ್.ಎಸ್.ಎಸ್ ಸಂಯೋಜನಾಧಿಕಾರಿ ಡಾ.ಅಶೋಕ ಕುಮಾರ ಪಾಳೇದ ಉಪಸ್ಥಿತರಿರುವರು.
ಕಾರ್ಯಕ್ರಮಕ್ಕೂ ಮುನ್ನ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ಅವರ ಜೊತೆ ವಿದ್ಯಾರ್ಥಿಗಳು ಗಿಡ ನೆಡುವರು ಮತ್ತು ಸಂವಾದ ನಡೆಸುವರು.