ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ  ಎ.ಆರ್.ಎಂ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಜೂನ್ 26 ರಂದು ಬೆಳಗ್ಗೆ 11 ಗಂಟೆಗೆ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮತ್ತು ಎ.ಆರ್.ಎಂ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಹಾಗೂ ಭಾರತೀಯ ಕಲಾ ಸಾಂಸ್ಕøತಿಕ ಅಕಾಡೆಮಿ(ರಿ)ದಾವಣಗೆರೆ, (ಮನಸದಾರ ಸಮುದಾಯ ಮಾನಸಿಕ ಆರೋಗ್ಯ ಕೇಂದ್ರ) ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ. ಮ. ಕರಣ್ಣವರ ಕಾರ್ಯಕ್ರಮ ಉದ್ಘಾಟಿಸುವರು. ಎ.ಆರ್.ಎಂ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಎಂ.ಡಿ ಅಣ್ಣಯ್ಯ ಅಧ್ಯಕ್ಷತೆ ವಹಿಸುವರು.
 ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ್, ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿಗಳು ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಮುರಳೀಧರ್ ಪಿ.ಡಿ, ಹಿರಿಯ ನ್ಯಾಯವಾದಿಗಳು ಮತ್ತು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಎಚ್ ಅರುಣ್ ಕುಮಾರ್ ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಎಸ್.ಎಸ್.ಐ.ಎಂ.ಎಸ್ ಮಹಾ ವೈದ್ಯಕೀಯ ಕಾಲೇಜಿನ ಮನೋವೈದ್ಯರಾದ ಡಾ. ಮೃತ್ಯುಂಜಯ, ಮಾನಸ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಕ್ಷ್ಮಿ ಬಿ.ಎಸ್ ಉಪಸ್ಥಿತರಿರುವರು. 

Leave a Reply

Your email address will not be published. Required fields are marked *

You missed