ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ರಾಜ್ಯದ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ 5 ದಿನಗಳ ಇಂಟಲೆಕ್ಚಲ್ ಪ್ರಾಪರ್ಟಿ ರೈಟ್ಸ್[ಐ.ಪಿ.ಆರ್}ಮತ್ತು ಎಂಟರ್ ಪ್ರೆನರ್ಶಿಪ್ ಡೆವೆಲಪ್ಮೆಂಟ್ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಜುಲೈ 11 ರಿಂದ 15 ರವರೆಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ. ಯು. ಆರ್. ರಾವ್ ವಿಜ್ಞಾನ ಭವನ, ಜಿ.ಕೆ.ವಿ.ಕೆ ಆವರಣ, ಮೇಜರ್ ಸಂದೀಪ್ ಉನ್ನೀಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು-560097(ದೂ. ಸಂ:080-29721550) ಇಲ್ಲಿ ಕಾರ್ಯಾಗಾರ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ರೂ 2,000 ಹಾಗೂ ಉಪನ್ಯಾಸಕರಿಗೆ ರೂ 2,500 ನೊಂದಣಿ ಶುಲ್ಕ ನಿಗಧಿಪಡಿಸಲಾಗಿದೆ. ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಜುಲೈ 5 ರೊಳಗಾಗಿ ಶುಲ್ಕ ಪಾವತಿಸುವ ಮೂಲಕ ನೊಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ಸೈಟ್ : www.ksrtcademy.in ಸಂಪರ್ಕಿಸಲು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.