ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಭಾಗವಹಿಸಿ ರಾಜೀ ಸಂಧಾನದ ಮಾಡಿಕೊಳ್ಳುವ ಮೂಲಕ ವಿವಾದಗಳನ್ನು ಇತ್ಯರ್ಥಪಡಿಸುವುದರಿಂದ ಎರಡೂ ಪಕ್ಷಗಾರರಿಗೆÉ ಲಾಭವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದÀ ಶ್ರೀಮತಿ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.
ಸೋಮವಾರ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜುಲೈ 8 ರಂದು ನಡೆಯುವ ರಾಷ್ಟ್ರೀಯ ಲೋಕಾದಾಲತ್ ಕುರಿತು ಸಾರ್ವಜನಿಕರಿಗೆ ಮಾಹಿತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜುಲೈ 8 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಹೆಚ್ಚು ಪ್ರಕರಣಗಳು ಇತ್ಯಾರ್ಥವಾಗುವಂತೆ ನೋಡಿಕೊಳ್ಳಬೇಕು. ಇದಕ್ಕೆ ಎಲ್ಲಾ ವಕೀಲರ ಸಹಕಾರ ಬಹಳ ಮುಖ್ಯವಾಗಿರುತ್ತದೆ. ರಾಜೀ ಸಂಧಾನದ ಮೂಲಕ ಇತ್ಯರ್ಥವಾಗುವ ಎಲ್ಲಾ ಪ್ರಕರಣಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ತೆಗೆದುಕೊಳ್ಳಲಾಗುತ್ತದೆ. ಸಾರ್ವಜನಿಕರು ಇದರ ಹೆಚ್ಚು ಲಾಭ ಪಡೆಯುವ ಮೂಲಕ ಯಶಸ್ಸಿಗೆ ಸಹಕರಿಸಬೇಕೆಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಮಾತನಾಡಿ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದು, ರಾಜಿಯಾಗಬಲ್ಲ ಹೆಚ್ಚಿನ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು ಮತ್ತು ರಾಜಿ ಪೂರ್ವ ಸಮಾಲೋಚನೆಗಳನ್ನು ನಡೆಸಬಹುದು ಎಂದು ಹೇಳಿದರು.
ಪ್ರಚಾರ : ಜುಲೈ 8 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಕುರಿತು ಸಾರ್ವಜನಿಕರಿಗೆ ಮಾಹಿತಿ ಮತ್ತು ಅರಿವು ಮೂಡಿಸಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ, ಆಟೋ ರಿಕ್ಷಾಗೆ ಧ್ವನಿವರ್ಧಕವನ್ನು ಅಳವಡಿಸಿ ನಗರದೆಲ್ಲೆಡೆ ಪ್ರಚಾರ ಕೈಗೊಳ್ಳಲಾಯಿತು ಹಾಗೂ ಸಾರ್ವಜನಿಕರಿಗೆ ಭಿತ್ತಿ ಪತ್ರಗಳನ್ನು ಹಂಚಲಾಯಿತು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿವಪ್ಪ ಸಲಗೇರೆ, 1 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ವಿಜಯಾನಂದ, 2 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಶ್ರೀನಿವಾಸ ಕೌಟುಂಬಿಕ ನ್ಯಾಯಾಧೀಶರಾದ ದಶರಥ ಹಾಗೂ ಇನ್ನಿತರರು ಉಪಸ್ಥಿತರಿದ್ದರು.