ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ‘ಮಾದರಿ ವೃತ್ತಿ ಕೇಂದ್ರದ ವತಿಯಿಂದ ಜುಲೈ 21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂ. 51 ರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಹಲವು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಎಸ್ಸಿ(ನರ್ಸಿಂಗ್) ಎ.ಎನ್.ಎಮ್, ಜಿ.ಎನ್.ಎಮ್ ಹಾಗೂ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.
ಆಸಕ್ತ ಅಭ್ಯರ್ಥಿಗಳು ನಿಗಧಿತ ಸಮಯಕ್ಕೆ ಕನಿಷ್ಠ 10 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ. ಸಂ. 08192-259446, ಮೊ.6361550016 ಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ..ಡಿ ತಿಳಿಸಿದ್ಧಾರೆ.