ನ್ಯಾಮತಿ:
ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗಣ್ಯರಿಗೆ ಸನ್ಮಾನ ಸಮಾರಂಭವನ್ನು ಜುಲೈ 30ರಂದು ಇಲ್ಲಿನ ಬನಶಂಕರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರ ಚಂದ್ರಶೇಖರ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಸೆಸ್ಸೆಲ್ಲಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 75ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಆರ್ಹ ವಿದ್ಯಾರ್ಥಿಗಳು ಜುಲೈ 23ರ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ವಿರೇಶ ಬುಕ್‍ಸ್ಟಾಲ್, ಪಟ್ಟಣ ಪಂಚಾಯಿತಿ ಕಚೇರಿ ಪಕ್ಕ, ನ್ಯಾಮತಿ ಅವರಿಗೆ ಸಲ್ಲಿಸುವಂತೆ ತಿಳಿಸಿದರು.
ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 70191 41818, 95355 86636 ಸಂಪರ್ಕಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಎನ್.ಡಿ.ಪಂಚಾಕ್ಷರಪ್ಪ, ತಾಲ್ಲೂಕು ಗೌರವಾಧ್ಯಕ್ಷ ಬೆಳಗುತ್ತಿ ಶಿವಲಿಂಗಪ್ಪ, ಉಪಾಧ್ಯಕ್ಷ ಕತ್ತಿಗೆ ವೀರೇಶ, ಹಲಗೇರಿ ವಿರೇಶ, ನರೇಂದ್ರ, ಪಿ. ವೀರೇಶ, ಮಹಿಳಾ ಘಟಕದ ಗೌರವಾಧ್ಯಕ್ಷೆ ವನಜಾಕ್ಷಮ್ಮ, ನುಚ್ಚಿನ ರಾಜು ಇದ್ದರು.