ದಾವಣಗೆರೆ; ಜುಲೈ. 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಜುಲೈ 26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಇಂಡಸ್ಟ್ರಿಯಲ್ ಏರಿಯಾ ಶ್ರೀರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಮಹೋತ್ಸವವನ್ನು ಏರ್ಪಡಿಸಲಾಗಿದೆ.
ರಾಜ್ಯ ಮಹಿಳಾ ನಿಲಯ, ದಾವಣಗೆರೆ ನಿವಾಸಿಗಳಾದ ರಮ್ಯ ಜೊತೆ ನಾಗರಾಜ ಪರಮೇಶ್ವರ ಹೆಗಡೆ ಹಾಗೂ ವಿನೋಧ ಜೊತೆ ಮಲ್ಲಿಕಾರ್ಜುನ ಯು.ಎಂ ಇವರ ವಿವಾಹವನ್ನು ನಿಶ್ಚಯಿಸಲಾಗಿದೆ.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಜಿಲ್ಲಾ ಪೋಲೀಸ್ ವರಿಷ್ಠಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಪಂಚಾಯತ್. ಸಿ.ಇ.ಒ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಧಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ ರಾಜ್ಯ ಮಹಿಳಾ ನಿಲಯ, ದಾವಣಗೆರೆ ಅಧೀಕ್ಷಕರಾದ ಶ್ರೀಮತಿ ಶಕುಂತಲಾ ಬಿ ಕೋಳೂರ ಭಾಗವಹಿಸುವರು.